ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲವಿಕಾಸಕ್ಕೆ ಹಲವು ಬಹುಮಾನ, ಕೃತಿ ಎನ್.ಪಿ ಗುಂಡೆಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದಿದ್ದಾರೆ.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ಐದು ಕಿಲೋಮೀಟರ್ ವೇಗದ ನಡಿಗೆಯಲ್ಲಿ ಸಿಂಚನ್ ಕೆ.ಎ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ, ಚಕ್ರ ಎಸೆತದಲ್ಲಿ ಸಾನ್ವಿತ್ ಆಳ್ವ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ, 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಹ್ಯಾಮರ್ ಎಸೆತದಲ್ಲಿ ವೈಷ್ಣವಿ ಶೆಟ್ಟಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ, ಎತ್ತರ ಜಿಗಿತದಲ್ಲಿ ಪ್ರಕೃತಿ ಶೆಟ್ಟಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ, 14ರ ವಯೋಮಾನದ 8ನೇ ತರಗತಿ ಬಾಲಕರ ವಿಭಾಗದಲ್ಲಿ ಪ್ರೀತಂ ಗೌಡ ಕೆ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ, ಎತ್ತರ ಜಿಗಿತದಲ್ಲಿ ಮೊಹಮ್ಮದ್ ಸಹಲ್ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ, ಪ್ರಾಥಮಿಕ ಬಾಲಕರ ವಿಭಾಗದ 400 ಮೀಟರ್ ಓಟದಲ್ಲಿ ದೀಪಿತ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಬಾಲಕಿಯರ ವಿಭಾಗದ 600 ಮೀಟರ್ ಓಟದಲ್ಲಿ ಧರಿತ್ರಿ ಕೆ. ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ, ಗುಂಡೆಸೆತದಲ್ಲಿ ಕೃತಿ ಎನ್ ಪಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಪೂಜಾರಿ ಹಾಗೂ ವಿಶಾಲಾಕ್ಷಿ ಹೆಚ್ ಆಳ್ವ ತರಬೇತುಗೊಳಿಸಿರುತ್ತಾರೆ. ವಿಜೇತರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.