Published On: Wed, Nov 29th, 2023

ಪ್ರೌಢಶಾಲಾ ಸಹಶಿಕ್ಷಕರ ದ. ಕ. ಜಿಲ್ಲಾ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಬಂಟ್ವಾಳ ತಾಲೂಕು ಘಟಕದ ಸಹಯೋಗದಲ್ಲಿ ಪ್ರೌಢಶಾಲಾ ಸಹಶಿಕ್ಷಕರ ದಕ್ಷಿಣ ಕನ್ನಡ ಜಿಲ್ಲಾ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ ಮಂಗಳವಾರ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ವಿಧಾನಪರಿಷತ್ತು ಸದಸ್ಯ ಎಸ್.ಎಲ್. ಭೋಜೇಗೌಡ, ಶಿಕ್ಷಕರಿಗೆ ಅನಗತ್ಯ ಕರ್ತವ್ಯದ ಹೊರೆ, ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪಗಳು ಸಲ್ಲದು.

ರಾಜ್ಯದಲ್ಲಿ ಶಿಕ್ಷಣ ತಜ್ಞರ ನೇತೃತ್ವದಲ್ಲಿ ಪಠ್ಯರಚನೆ, ಶಿಕ್ಷಣ ನೀತಿ ಜೊತೆಗೆ ಮೂಲ ಸೌಕರ್ಯ ಒದಗಿಸಬೇಕು ರಾಜ್ಯದಲ್ಲಿ ಶೇ.45ರಷ್ಟು ಶಿಕ್ಷಕರ ಕೊರತೆ ಕಾಡುತ್ತಿದ್ದು, ಶಾಲೆಗಳಲ್ಲಿ ಶೌಚಾಲಯ, ಕೊಠಡಿ ಸಮಸ್ಯೆಗಳು ಇವೆ. ಜನಪ್ರತಿನಿಧಿಗಳು ಶಿಕ್ಷಕರ ಕುರಿತು ಕಾಳಜಿ ವಹಿಸಬೇಕು, ಸರಕಾರಿ ಸೇರಿದಂತೆ ಅನುದಾನಿತ ಮತ್ತು ಅನಿದಾನ ರಹಿತ ಶಾಲೆಗಳ ನಡುವೆ ತಾರತಮ್ಯವೆಸಗದೆ ನೆರವು ನೀಡಬೇಕು ಎಂದರು.

ಸಮ್ಮೇಳನವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಸದನದಲ್ಲಿ ಕ್ಷೇತ್ರದ ನ್ಯೂನತೆಗಳನ್ನು ಸರಿಪಡಿಸುವ ಅವಕಾಶ ಇದೆ. ಸರ್ವ ಶಿಕ್ಷಾ ಅಭಿಯಾನದ ಮೂಲಕ ಕೊಠಡಿಗಳ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಾಗಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ಅದರಿಂದ ಉತ್ತಮ ಕೊಡುಗೆಗಳು ಲಭಿಸಿವೆ ಎಂದರು.

ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಸಮ್ಮೇಳನ ಪೂರಕವಾಗಿದೆ ಎಂದು ಅವರು ಶಿಕ್ಷಕರ ಗಂಭೀರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸರಕಾರ ಪ್ರಯತ್ನಿಸಲಿದೆ ಎಂದು ಭರವಸೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಸಂಘದ ಅಧ್ಯಕ್ಷ ಮಹಮ್ಮದ್ ರಿಯಾಜ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿದ್ಧಬಸಪ್ಪ ಬಿ, ನಿಕಟಪೂರ್ವ ರಾಜ್ಯಾಧ್ಯಕ್ಷ ಎಚ್.ಕೆ.ಮಂಜುನಾಥ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ ರಾಜಲಕ್ಷ್ಮೀ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ರಾಮು ಆರ್ ಗುಗವಾಡ, ರಾಜ್ಯ ಸಹಕಾರ್ಯದರ್ಶಿ ದೇವರಾಜೇಗೌಡ, ರಾಜ್ಯ ಉಪಾಧ್ಯಕ್ಷ ಸ್ಟ್ಯಾನಿ ಜಿ ತಾವ್ರೊ,  ಜಿಲ್ಲಾ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ, ಸಂಘದ ಶಿವಮೊಗ್ಗ ಅಧ್ಯಕ್ಷ ದರ್ಮಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್, ವಿವಿಧ ಶಿಕ್ಷಕ ಸಂಘಗಳ ಪದಾಧಿಕಾರಿಗಳಾದ ಆಶಾ ನಾಯಕ್, ಪ್ರಮೀಳಾ, ಅಬ್ರಹಾಂ, ರಾಮಕೃಷ್ಣ ಶಿರೂರು, ಶಾಂತಾರಾಮ್, ಚಂದ್ರಶೇಖರ, ರಾಧಾಕೃಷ್ಣ, ರಾಮಾನಂದ ರಾವ್, ಉಮಾನಾಥ ರೈ ಮೇರಾವು, ನವೀನ್ ಪಿ.ಎಸ್, ರತ್ನಾವತಿ, ಉಸ್ಮಾನ್ ಜಿ, ಗಣೇಶ್ ಐತಾಳ್, ಮಾರ್ಕ್ ಮೆಂಡೋನ್ಸಾ ಉಪಸ್ಥಿತರಿದ್ದರು.

ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ಜೋಯಲ್ ಲೋಬೊ ಸ್ವಾಗತಿಸಿದರು. ಜಿಲ್ಲಾ ಸಹಕಾರ್ಯದರ್ಶಿ ಶಶಿಕಾಂತ ಚೆಂಬಾರ್ಪು ವಂದಿಸಿದರು. ಮಹೇಶ್ ಕರ್ಕೇರ ಸಿದ್ಧಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಶೈಕ್ಷಣಿಕ ಗೋಷ್ಠಿ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನಗಳು ನಡೆಯಿತು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter