ಸ್ಕೌಟ್ಸ್ ಮಕ್ಕಳಿಗೆ ಸಮವಸ್ತ್ರ ವಿತರಣೆ
ಬಂಟ್ವಾಳ: ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಸ್ಕೌಟ್ಸ್ ನಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಜೀವನ ಕೌಶಲಗಳ ಅನುಭವವನ್ನು ಪಡೆಯುತ್ತಾರೆ ಎಂದು ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ದನ ಪೂಜಾರಿ ಹೇಳಿದರು.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ವಿತರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ, ಶಾಲಾ ಸ್ಕೌಟ್ಸ್ ಕ್ಯಾಪ್ಟನ್ ಶಿಕ್ಷಕಿ ಸಂಗೀತ ಶರ್ಮ ಪಿ. ಜಿ, ಉಪಸ್ಥಿತರಿದ್ದರು.