“ಗುಲಾಬಿ ಆಂದೋಲನ” ಕಾರ್ಯಕ್ರಮ
ಬಂಟ್ವಾಳ: ದ. ಕ. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ “ಗುಲಾಬಿ ಆಂದೋಲನ” ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ಕೊಡಂಗೆ ದ.ಕ.ಜಿ.ಪ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ರೈ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಶೃತಿ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ತಂಬಾಕು ದುಶ್ಚಟದ ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಥ ನಡೆಸಲಾಯಿತಲ್ಲದೆ ಸುತ್ತಮುತ್ತಲಿನ ಅಂಗಡಿಗಳಿಗೆ ಗುಲಾಬಿ ಹೂ ನೀಡಿ ತಂಬಾಕು ವಸ್ತುಗಳನ್ನು ಮಾರಾಟ ಮಾಡದಂತೆ ಅಂಗಡಿ ಮಾಲಕರಿಗೆ ಮನವರಿಕೆ ಮಾಡಲಾಯಿತು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಧ, ಆರೋಗ್ಯ ನಿರೀಕ್ಷಣಾಧಿಕಾರಿ ರಾಕೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸೌಮ್ಯ, ಆಶಾ ಕಾರ್ಯಕರ್ತೆ ಸರಸ್ವತಿ, ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ ಸುಜಾತ, ಶಾಲಾ ಮುಖ್ಯ ಶಿಕ್ಷಕಿ ಸುಗುಣ ಮತ್ತು ಎಲ್ಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಅಬ್ದುಲ್ ಜಲೀಲ್ ಭಾಗವಹಿಸಿದರು.