ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಗಳ ಉದ್ಘಾಟನೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 14 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಮಿತಾ ಪೂಜಾರಿ, ಮಾಜಿ ಉಪಾಧ್ಯಕ್ಷೆ ಶಕೀಲಾ ಕೆ.ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಶೋಕ್ ರೈ, ಧನಂಜಯ ಗೌಡ, ಸುಜಾತಾ ಸಿ ಜಗದೀಶ್ ಪೂಜಾರಿ, ಲತೀಫ್ ನೇರಳಕಟ್ಟೆ, ಮಣಿ ಬಾಲವಿಕಾಸ ಕರೆಸ್ಪಾಂಡೆನ್ಸ್ ಪ್ರಹ್ಲಾದ್ ಶೆಟ್ಟಿ, ನೇರಳಕಟ್ಟೆ ಸಿ.ಎ.ಬ್ಯಾಂಕಿನ ಉಪಾಧ್ಯಕ್ಷ ಡಿ . ತನಿಯಪ್ಪ ಗೌಡ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳೀಧರ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ,ಈಶ್ವರ ಭಟ್, ನಾರಾಯಣ ಗೌಡ, ಸೋಮಶೇಖರ್ ಗೌಡ, ರಾಮಚಂದ್ರ ಶೆಟ್ಟಿ, ಚೇತನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

