ಬಂಟ್ವಾಳ ಎಸ್.ವಿ.ಎಸ್. ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ
ಬಂಟ್ವಾಳ: ಸದೃಢ ದೇಹದಿಂದ ಸದೃಢ ದೇಶ ಕಟ್ಟಲು ಸಾಧ್ಯ ವಿದ್ಯಾರ್ಥಿ ಜೀವನದಲ್ಲಿಯೇ ಕ್ರೀಡೆಗಳಲ್ಲಿ ತೊಡಗಿಕೊಂಡರೆ ದೈಹಿಕ ಹಾಗೂ ಮಾನಸಿಕವಾಗಿ ಸಬಲರಾಗಲು ಸಾಧ್ಯ ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಲಲಿತಾ ಜಯರಾಮ್ ಇರಾ ಹೇಳಿದರು.

ಬಂಟ್ವಾಳ ಎಸ್.ವಿ.ಎಸ್. ಪದವಿ ಹಾಗೂ ಪದವಿಪೂರ್ವ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಯಾವುದಾದರೊಂದು ತಮ್ಮ ಆಸಕ್ತಿಯ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ನಿರಂತರ ಅಭ್ಯಾಸ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಮೂಲಕ ದೇಶಕ್ಕೆ ಕೀರ್ತಿಯನ್ನು ತರಬೇಕು. ದೇಶವನ್ನು ಪ್ರತಿನಿಧಿಸಿ ವಿಜಯಿಯಾದಾಗ ಸಿಗುವ ಸಂತೋಷ, ಹೆಮ್ಮೆ ಹಾಗೂ ಆತ್ಮತೃಪ್ತಿ ಬೇರಾವುದರಲ್ಲಿಯೂ ಸಿಗದು ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಯೋಗ ವರ್ಧನ್ ಡಿ. ಎಮ್ ರವರು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಮನೋಭಾವವನ್ನು ಬೆಳಸಿಕೊಳ್ಳಬೇಕು ಆಗ ಎಂತಹ ಕಠಿಣ ಪರಿಸ್ಥಿತಿಯನ್ನು ಕೂಡ ಧೈರ್ಯದಿಂದ ಎದುರಿಸುವ ಮನಸ್ಥೈರ್ಯ ಬರುತ್ತದೆ ಎಂದರು.
ಎಸ್.ವಿ.ಎಸ್.ಸಮೂಹ ಸಂಸ್ಥೆಗಳ ಸಂಚಾಲಕಿ ಕೆ.ರೇಖಾ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐ.ಕ್ಯು.ಎ.ಸಿ. ಸಂಯೋಜಕ ಡಾ.ಟಿ.ಕೆ.ರವೀಂದ್ರನ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶಿವಣ್ಣ ಪ್ರಭು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಹೇಮಲತಾ, ಶಾಖಾಂಬರಿ ಪ್ರಾರ್ಥಿಸಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ ಸ್ವಾಗತಿಸಿದರು. ಉಪನ್ಯಾಸಕ ಶ್ರೀ ಕಿಟ್ಟು ರಾಮಕುಂಜ ಕಾರ್ಯಕ್ರಮ ನಿರೂಪಿಸಿದರು. ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಸುಪ್ರೀತ್ ಕಡಕೋಳ್ ವಂದಿಸಿದರು.