ಬಂಟ್ವಾಳ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಕೈರಂಗಳದಲ್ಲಿ  ದ.೧ ರಂದು ನಡೆಯಲಿರುವ ಸಾಹಿತ್ಯ ಸಮಾವೇಶ ೨೦೨೩ ರ ಸರ್ವಾಧ್ಯಕ್ಷರಾಗಿ ಹಿರಿಯ ಕವಿ, ಲೇಖಕ, ಬಹುಮುಖ ಪ್ರತಿಭೆಯ ಶ್ರೀನಿವಾಸ ಭಟ್ ಸೇರಾಜೆ ಆಯ್ಕೆಯಾಗಿದ್ದಾರೆ.

ಯಕ್ಷಗಾನ ವೇಶ ಧಾರಿಯಾಗಿ, ತಾಳಮದ್ದಲೆ ಅರ್ಥದಾರಿಯಾಗಿ ಶ್ರೀನಿವಾಸ ಭಟ್ಟರು ಪ್ರಸಿದ್ಧರಾಗಿದ್ದಾರೆ. ಹಲವು ಪತ್ರಕೆಗಳಲ್ಲಿ ಸಾವಿರಕ್ಕೂ ಹೆಚ್ಚು ಲೇಖನಗಳು, ಕವನಗಳು  ಪ್ರಕಟವಾಗಿವೆ.

ಹೊಂಗಿರಣ, ಹೊಂಗನಸು, ದೀಪ  ಮೊದಲಾದ ಕೃತಿಗಳು ಪ್ರಕಟಗೊಂಡಿವೆ. ಆಕಾಶವಾಣಿಯಲ್ಲಿ ಭಾವಗೀತೆ, ನಾಟಕ, ಚಿಂತನ ಪ್ರಸಾರಗೊಂಡಿದೆ. ಇವರ ದೀಪ ಕವನ ಸಂಕಲನಕ್ಕೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ಪ್ರಥಮ ಬಹುಮಾನ ಲಭಿಸಿದೆ.  ಕುಡ್ಪಲ್ತಡ್ಕ ನಿವಾಸಿಯಾಗಿರುವ ಇವರು ಪ್ರಸ್ತುತ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

By suddi9

Leave a Reply

Your email address will not be published. Required fields are marked *