ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಂಟ್ವಾಳ: ಫರಂಗಿಪೇಟೆಯ ವಿಜಯನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಿಲಾಮಯ ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಜ.21ರಿಂದ 26ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಫರಂಗಿಪೇಟೆಯ ವೀರಾಂಜನೇಯ ವ್ಯಾಯಾಮ ಶಾಲೆಯಲ್ಲಿ ನಡೆಯಿತು.
ಶ್ರೀ ಆಂಜನೇಯ ದೇವಸ್ಥಾನ ನಿರ್ಮಾಣ ಸಮಿತಿಯ ಅಧ್ಯಕ್ಷ ಅಜಿತ್ ಚೌಟ ದೇವಸ್ಯ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಸರ್ವರು ಸಹಕರಿಸುವಂತೆ ಕೋರಿದರು.
ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಕಾರ್ಯದ್ಯಕ್ಷ ಸದಾನಂದ ಆಳ್ವ ಕಂಪ, ಪ್ರಧಾನ ಸಂಚಾಲಕ ದೇವಸ್ಯ ಪ್ರಕಾಶ್ಚಂದ್ರ ರೈ, ಪ್ರದಾನ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಕೊಡ್ಮಾನ್, ಕೋಶಾಧಿಕಾರಿ ಉಮೇಶ್ ಸಾಲ್ಯಾನ್ ಬೆಂಜನಪದವು, ನಿರ್ಮಾಣ ಸಮಿತಿಯ ಕಾರ್ಯಧ್ಯಕ್ಷ ಮಹಾಬಲ ಕೊಟ್ಟಾರಿ ಮುನ್ನೂರು, ಪ್ರಧಾನ ಸಂಚಾಲಕ ವಿಠ್ಠಲ್ ಆಳ್ವ ಗರೋಡಿ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಶೇಖರ್ ಗಾಂಭೀರ ಸುಜಿರುಗುತ್ತು, ವಿಶ್ವನಾಥ ಶೆಟ್ಟಿ ಕೊಟ್ಟಿಂಜ, ಪುರಾನ್ ಚಂದ್ರ ರೈ ಉಪಸ್ಥಿತರಿದ್ದರು.
ಶ್ರೀ ಆಂಜನೇಯ ದೇವಸ್ಥಾನ ನಿರ್ಮಾಣ ಸಮಿತಿಯ ಪ್ರ.ಕಾರ್ಯದರ್ಶಿ ಉಮೇಶ್ ಶೆಟ್ಟಿ ಬರ್ಕೆ ಪ್ರಾಸ್ತವನೆಗೈದರು.
ಶ್ರೀ ಅಂಜನಾದೇವಿ ಮಾತೃ ಮಂಡಳಿಯ ಅಧ್ಯಕ್ಷೆ ಕವಿತಾ ದೇವದಾಸ ಅರ್ಕುಳ ಸ್ವಾಗತಿಸಿದರು, ಆಡಳಿತ ಮಂಡಳಿಯ ಕಾರ್ಯದರ್ಶಿ ಕರುಣಾಕರ ಕೊಟ್ಟಾರಿ ವಂದಿಸಿದರು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದ್ಯಕ್ಷ ತೇವು ತಾರಾನಾಥ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.