Published On: Sat, Dec 9th, 2023

ಮದುವೆಗೆ ತೆರಳುವ ವೇಳೆ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

ಕೈಕಂಬ: ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಕುಮಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ೮ರಂದು ಶುಕ್ರವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ.

ರಾಮಕೃಷ್ಣ ರಾವ್

ಗುರುಪುರ ಕೈಕಂಬ ಮೂಲದ ಕಿನ್ನಿಕಂಬಳದ ನಿವಾಸಿಗಳಾದ ರಾಮಕೃಷ್ಣ ರಾವ್(೭೧) ಅವರ ಧರ್ಮಪತ್ನಿ ವಿದ್ಯಾಲಕ್ಷ್ಮೀ ರಾಮಕೃಷ್ಣರಾವ್(೬೭), ಮುಚ್ಚೂರು ಮೂಲದ ಪುಷ್ಪಾ ಮೋಹನ್ ರಾವ್(೬೨), ಸುಹಾಸ್ ಗಣೇಶ್ ರಾವ್(೩೦) ಇನ್ಫೋಸಿಸ್‌ನಲ್ಲಿ ಎಂಜಿನಿಯರ್ ಆಗಿದ್ದರು, ಸುರತ್ಕಲ್ ಮೂಲದ ಚೆನ್ನೈನಲ್ಲಿ ಉದ್ಯೋಗದಲ್ಲಿದ್ದ ಡಾ. ಅರವಿಂದ ಮೃತರು ಎನ್ನಲಾಗಿದೆ.

ಸುಹಾಸ್‌ ಗಣೇಶ್‌ ರಾವ್

ಇವರುಗಳು ಸ್ವಿಪ್ಟ್ ಕಾರಿನಲ್ಲಿ ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದ ಮದುವೆಗೆ ತೆರಳುತ್ತಿದ್ದ ಸಂದ‌ರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೆ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾಲಕ್ಷ್ಮೀ ರಾಮಕೃಷ್ಣ ರಾವ್‌

ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗವೂ ಸಂಪೂರ್ಣ ಜಖಂಗೊಂಡಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸಂದರ್ಭ ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter