ನೇತಾಜಿ ಯುವಕ ಸಂಘ ಸಜೀಪ ಆಶ್ರಯದಲ್ಲಿ, ಫಾದರ್ ಮುಲ್ಲರ್ಸ್ ಆಸ್ಪತ್ರೆ ಸಹಯೋಗದೊಂದಿಗೆ: ರಕ್ತದಾನ ಶಿಬಿರ
ಬಂಟ್ವಾಳ: ನೇತಾಜಿ ಯುವಕ ಸಂಘ ಸಜೀಪ ಇದರ ಆಶ್ರಯದಲ್ಲಿ ಫಾದರ್ ಮುಲ್ಲರ್ಸ್ ಆಸ್ಪತ್ರೆ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಸಜೀಪನಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನಡೆಯಿತು.
ಯುವಕ ಸಂಘದ ಸ್ಥಾಪಕಾಧ್ಯಕ್ಷ ಯಶವಂತ ದೇರಾಜೆ ಅವರು ರಕ್ತದಾನ ಶಿಬಿರ ಉದ್ಘಾಟಿಸಿದರು. ಇದೇ ವೇಳೆ 11 ಮಂದಿ ಹಿರಿಯ ಸದಸ್ಯರನ್ನು ಗೌರವಿಸಲಾಯಿತು.
ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ, ಸ್ಕ್ಯಾಡ್ಸ್ ಮಂಗಳೂರು ಅಧ್ಯಕ್ಷ ರವೀಂದ್ರ ಕಂಬಳಿ,ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ಇಕ್ಬಾಲ್ ಎಸ್ಎನ್,ಆದರ್ಶ್ ಆಸ್ಪತ್ರೆ ವೈದ್ಯ ಡಾ.ಮಹಿಮಾ, ಮೋಹಿನಿ,ಧರ್ನಮ್ಮ, ಸಂಘದ ಅಧ್ಯಕ್ಷ ನಿತಿನ್ ಅರಸ ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಸ್ವಾಗತಿಸಿ, ವಂದಿಸಿದರು. ಮನೋಜ್ ಕಾರ್ಯಕ್ರಮ ನಿರ್ವಹಿಸಿದರು