ಬಂಟ್ವಾಳ: ಪೆರಾಜೆ ವಿದ್ಯಾ ನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥೆಯ ಶಿಕ್ಷಕ- ರಕ್ಷಕರ ಕ್ರೀಡಾಕೂಟ ನಡೆಯಿತು.

ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಬಾಂಧವ್ಯದ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರ ಬಹುಮುಖ್ಯವಾದದ್ದು. ಬಾಲವಿಕಾಸದ ಹೊಸ ಕ್ರೀಡಾಂಗಣದಲ್ಲಿ ಹೆತ್ತವರಿಗಾಗಿ ಆಯೋಜಿಸಿಕೊಳ್ಳುವ ಮೊದಲ ಕ್ರೀಡಾಕೂಟ ಇದಾಗಿದೆ ಎಂದರು.

ಶಾಲೆಯ ಆಡಳಿತಾಧಿಕಾರಿ ರವೀಂದ್ರ ದರ್ಬೆ ಮತ್ತು ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ ಶೆಟ್ಟಿ ಕ್ರೀಡಾಕೂಟಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಶಿಕ್ಷಕ- ರಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು,  ಪೋಷಕರು ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಅನಂತರ ಶಾಲೆಯ ಶಿಕ್ಷಕರಿಗೆ ಹಾಗೂ ಪೋಷಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ವಿತರಿಸಲಾಯಿತು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಪೂಜಾರಿ ಹಾಗೂ ವಿಶಾಲಾಕ್ಷಿ ಎಚ್ ಆಳ್ವ ಸಹಕರಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ ಶೆಟ್ಟಿ ಸ್ವಾಗತಿಸಿ, ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಹರಿಪ್ರಸಾದ್ ಕುಲಾಲ್ ವಂದಿಸಿದರು. ಶಿಕ್ಷಕಿ ಸುಪ್ರಿಯಾ ಡಿ ಕಾರ್ಯಕ್ರಮ ನಿರೂಪಿಸಿದರು. 

By suddi9

Leave a Reply

Your email address will not be published. Required fields are marked *