ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಆಯ್ಕೆ
ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಧಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಆಯ್ಕೆಯಾಗಿದ್ದಾರೆ.

ಭಾನುವಾರ ದೇವಸ್ಥಾನದ ವಠಾರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಗೌಡ ಮುದ್ದಾಜೆ, ಗೌರವ ಸಲಹೆಗಾರರಾಗಿ ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಮತ್ತು ಬಿ.ರಮಾನಾಥ ರೈ, ಕಾರ್ಯಾಧ್ಯಕ್ಷರಾಗಿ ಸುಬ್ರಹ್ಮಣ್ಯ ಭಟ್ ದೈಲ ಹಾಗೂ ಶ್ರೀನಿವಾಸ್ ಸಪಲ್ಯ ಶಿವನಗರ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಚೌಟ ಮಡಂದೂರ್, ಕಾರ್ಯದರ್ಶಿಯಾಗಿ ಪ್ರದೀಪ್ ಮಿಯಾಲ್, ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್ ರಾಯಿ ಬೆಟ್ಟು ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.