Published On: Sat, Dec 16th, 2023

ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ ಮತ್ತು ತುಂಬೆಯಲ್ಲಿ ಆರೋಗ್ಯ ತಪಾಸಣೆ ದರದಲ್ಲಿ 25 ಶೇಕಡ ರಿಯಾಯಿತಿ

ಬಂಟ್ವಾಳ: ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಾರ್ಷಿಕ ಆರೋಗ್ಯ ತಪಾಸಣೆ ಯೋಜನೆಯಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಕಂಕನಾಡಿ ಮತ್ತು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಎಲ್ಲಾ ಆರೋಗ್ಯ ತಪಾಸಣೆಗಳ ಮೇಲೆ 25 ಶೇಕಡ ರಿಯಾಯಿತಿ ನೀಡಲಾಗಿದೆ. 

2023ರ ಡಿಸೆಂಬರ್ 15ರಿಂದ 2024ರ ಜನವರಿ 15ರ ವರೆಗೆ ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ ಮತ್ತು ಕಂಕನಾಡಿಯಲ್ಲಿ ಈ ಆರೋಗ್ಯ ತಪಾಸಣೆ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಎಲ್ಲಾ ರೀತಿಯ ಸಾಮಾನ್ಯ ಆರೋಗ್ಯ ತಪಾಸಣೆ, ಎಲ್ಲಾ ರೀತಿಯ ಸಮಗ್ರ ಆರೋಗ್ಯ ತಪಾಸಣೆ, ಸಂಪೂರ್ಣ ಹೃದಯ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ, ಮಹಿಳೆಯರ ಆರೋಗ್ಯ ತಪಾಸಣೆ, ಹಿರಿಯರ ಆರೋಗ್ಯ ತಪಾಸಣೆ ಸಹಿತ ಮೊದಲಾದ ಆರೋಗ್ಯ ತಪಾಸಣೆ ಸೌಲಭ್ಯಗಳನ್ನು ರಿಯಾಯಿತಿ ದರದಲ್ಲಿ ಪಡೆಯಬಹುದಾಗಿದೆ‌ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter