ಶಂಭೂರು ದ.ಕ.ಜಿ.ಪಂ ಸ. ಹಿರಿಯ ಪ್ರಾ. ಶಾಲೆಯಲ್ಲಿ ವಿವೇಕ ಯೋಜನೆಯಡಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿಗಳ ಉದ್ಘಾಟನೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶಂಭೂರು ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ ರೂ 13.5 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿಯನ್ನು ಸಂಸದ ನಳಿನ್ ಕುಮಾರ್ ಕಟೀಲು ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಂಸದರು ಸರಕಾರದ ಜತೆಗೆ ಊರಿನ ನಾಗರಿಕರು ಕೂಡ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಿದಾಗ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗುವುದಕ್ಕೆ ಸಾಧ್ಯ ಸರಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಸಂಸ್ಕಾರವಂತರಾಗಿ ಬದುಕುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನಗಳ ಜತೆಗೆ ಕಂಪೆನಿಗಳ ಸಿಎಸ್‌ಆರ್ ಅನುದಾನಗಳನ್ನೂ ಒದಗಿಸಲಾಗಿದೆ ಎಂದರು.
ನರಿಕೊಂಬು ಗ್ರಾ. ಪಂ.ಅಧ್ಯಕ್ಷ ಸಂತೋಷ್ ಕುಮಾರ್, ಗ್ರಾ.ಪಂ. ಸದಸ್ಯರಾದ ಪ್ರಕಾಶ್ ಮಡಿಮುಗೇರು, ಯೋಗೀಶ್ ಶಾಂತಿಲ, ಸವಿತಾ ಆರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗರಾಜ್ ಕೋಟ್ಯಾನ್, ಬಂಟ್ವಾಳ ತಾ.ಪಂ.ಮಾಜಿ ಉಪಾಧ್ಯಕ್ಷ ಆನಂದ ಶಂಭೂರು, ಮುಖ್ಯಶಿಕ್ಷಕ ಜಯರಾಮ ಡಿ. ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು, ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಜಯಂತಿ ವಂದಿಸಿದರು. ಶಂಕರ ನಾರಾಯಣ ರಾವ್ ನಿರ್ವಹಿಸಿದರು.