ಬಂಟ್ವಾಳ: ತಾಲೂಕಿನ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜ.19 ರಿಂದ ಜ. 25ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಭಾನುವಾರ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಡೆಯಿತು.
ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎಸ್. ಸುಬ್ರಹ್ಮಣ್ಯ ಐತಾಳ್ ಮಂಗಳೂರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಜೀರ್ಣೋದ್ಧಾರ ಸಮಿತಿ ಸಂಚಾಲಕ ಡಾ. ಮೋಹನ್ ಆಳ್ವ ಮೂಡಬಿದಿರೆ ಅಧ್ಯಕ್ಷತೆ ವಹಿಸಿ ಮಾತನಾಡಿ ಮನೆ, ಮನಗಳಲ್ಲಿ ಧಾರ್ಮಿಕ ವಾತವರಣವನ್ನು ನಿರ್ಮಿಸಿಕೊಳ್ಳಬೇಕು, ಏಕ ಮನಸ್ಸಿನಿಂದ ನಾವೆಲ್ಲರೂ ಸೇರಿ ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಮಾಜಿ ಸಚಿವ ಬಿ. ರಮನಾಥ ರೈ ಮಾತನಾಡಿ ದೈವೇಚ್ಚೇಯಂತೆ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಸುಗಮವಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ರವಿಶಂಕರ್ ಶೆಟ್ಟಿ ಬಡಾಜೆಗುತ್ತು ಮಾತನಾಡಿ ಭಕ್ತಿ ಇದ್ದಾಗ ದೇವಸ್ಥಾನ ನಿರ್ಮಾಣ ಕಾರ್ಯ ಸುಸೂತ್ರವಾಗಿ ನಡೆಯುತ್ತದೆ ಎಂದು ತಿಳಿಸಿದರು.

ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎಂ.ಎಸ್‌. ಶೆಟ್ಟಿ ಸರಪಾಡಿ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಉಪ್ಪಿನಂಗಡಿಯ ದಂತ ವೈದ್ಯ ಡಾ. ರಾಜರಾಂ ಕೊಂಗುಜೆ, ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಜಿ.ಪಂ. ಮಾಜಿ ಸದಸ್ಯ ಪದ್ಮಶೇಖ‌ರ್ ಜೈನ್, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸಂಜೀವ ಪೂಜಾರಿ ಕಟ್ಟದಡೆ, ನರಸಿಂಹ ಐತಾಳ್ ಅರಮನೆ, ಅರ್ಚಕ ಶಂಕರ ನಾರಾಯಣ ಹೊಳ್ಳ ಕೋಶಾಧಿಕಾರಿ ವಿಜಯಕೃಷ್ಣ ಐತಾಳ್, ಮೋಕೇಸರರಾದ ಉಮೇಶ್‌ ಆಳ್ವ ಕೊಟ್ಟುಂಜ, ವಿಠಲ ಎಂ. ಆರುಮುಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಶೆಟ್ಟಿ ಸರಪಾಡಿ ನಿರೂಪಿಸಿದರು. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ರಾಧಕೃಷ್ಣ ರೈ ಕೊಟ್ಟುಂಜ ವಂದಿಸಿದರು.

By suddi9

Leave a Reply

Your email address will not be published. Required fields are marked *