ಬಂಟ್ವಾಳಕ್ಕೆ ಮಾಜಿ ಡಿಸಿಎಂ ಡಾ.ಅಶ್ವಥ್ ನಾರಾಯಣ ಭೇಟಿ
ಬಂಟ್ವಾಳ: ಮಾಜಿ ಉಪ ಮುಖ್ಯಮಂತ್ರಿ, ಹಾಲಿ ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಮಂಗಳವಾರ ಬಂಟ್ವಾಳ ನಿರೀಕ್ಷಣಾ ಮಂದಿರಕ್ಕಾಗಮಿಸಿ ಇಲ್ಲಿನ ಪಕ್ಷದ ಪ್ರಮುಖರು, ಕಾರ್ಯಕರ್ತರೊಂದಿಗೆ ಕುಶಲೋಪಚರಿ ನಡೆಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ರವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರ.ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ, ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು, ಬೂಡಾ ಮಾಜಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ರಾಯಿ ಗ್ರಾ.ಪಂ.ಅಧ್ಯಕ್ಷ ಸಂತೋಷ್ ರಾಯಿಬೆಟ್ಟು, ಮಾಜಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಸೀತರಾಮ ಪೂಜಾರಿ, ಪವನ್ ಕುಮಾರ್ ಮತ್ತಿತರ ಪ್ರಮಖರು ಉಪಸ್ಥಿತರಿದ್ದರು.
ಕಡಬದಲ್ಲಿ ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಅಗಮಿಸಿದ್ದ ಮಾಜಿ ಡಿ.ಸಿ.ಎಂ ಡಾ.ಅಶ್ವಥನಾರಾಯಣ ಅವರು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹಾಗೂ ಇಲ್ಲಿನ ಪಕ್ಷದ ಪ್ರಮುಖರ ಜೊತೆ ಉಪಹಾರ ಸೇವಿಸಿ, ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಪಕ್ಷದ ಚಟುವಟಿಕೆಗೆ ಸಂಬಂಧಿಸಿ ಒಂದಷ್ಟು ವಿಚಾರ ವಿನಿಮಯ ನಡೆಸಿದರೆಂದು ತಿಳಿದು ಬಂದಿದೆ.