ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 139 ನೇ ಸಂಸ್ಥಾಪನ ದಿನಾಚರಣೆ
ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ಕಾಂಗ್ರೆಸ್ ಪಕ್ಷದ 139 ನೇ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಾಯಿತು.
ಬಂಟ್ವಾಳ ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರ್ ರವರು ಧ್ವಜಾರೋಹಣಗೈದು ಕಾರ್ಯಕರ್ಮಕ್ಕೆ ಚಾಲನೆ ನೀಡಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಪರಿಶ್ರಮದಿಂದ ಸೇರಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ.
ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಶೋಷಿತ ವರ್ಗಕ್ಕೆ ಶಕ್ತಿಯನ್ನು ನೀಡುವಂತಹ ಕಾರ್ಯಕ್ರಮವನ್ನು ಹಾಕಿ ಕಾಂಗ್ರೆಸ್ ಪಕ್ಷ ಕಳೆದ 138 ವರ್ಷಗಳ ಕಾಲ ಈ ದೇಶದಲ್ಲಿ ಬಲಿಷ್ಠವಾಗಿ ಬೆಳೆದಿದೆ ಎಂದರು.
ಈ ಸಂದರ್ಭದಲ್ಲಿ ಜಗನ್ನಾಥ ತುಂಬೆ, ಪ್ರವೀಣ್ ಕಿಣಿ, ವೆಂಕಪ್ಪ ಪೂಜಾರಿ, ಪದ್ಮನಾಭ ಬಡ್ಡಕಟ್ಟೆ,ವಿಜಯ ಅಲ್ಲಿಪಾದೆ, ರಾಜೀವ್ ಕಕ್ಕೆಪದವು, ಅಮ್ಮು ಅರ್ಬಿಗುಡ್ಡೆ, ರಿಯಾಜ್ ಕೆಳಗಿನಪೇಟೆ, ಚಿಕ್ಕ ಅರ್ಬಿಗುಡ್ಡೆ, ವಲಾರ್ ಬಡ್ಡಕಟ್ಟೆ, ನವಾಜ್ ಕೆಳಗಿನಪೇಟೆ, ಪುರುಷೋತ್ತಮ್ ಮಂಡಾಡಿ, ಆಶ್ರಿತ್ ಬಂಗೇರ ಪಂಜಿಕಲ್ಲು, ನಾಸೀರ್ ಕೆಳಗಿನಪೇಟೆ ಉಪಸ್ಥಿತರಿದ್ದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಾಬಲ ಬಂಗೇರ ವಂದಿಸಿದರು.