ಕಾರುಡಿಕ್ಕಿ ಯುವತಿ ಮೃತ್ಯು ಪ್ರಕರಣ: ಆರೋಪಿಗಳ ಬಂಧಿಸಿ ತನಿಖೆಗೆ ವಿ.ಹಿಂ.ಪ, ಬಜರಂಗದಳ ಒತ್ತಾಯ
ಬಂಟ್ವಾಳ: ಬಿ.ಸಿ.ರೋಡಿಗೆ ಸಮೀಪದ ಪಚ್ಚಿನಡ್ಕ ಎಂಬಲ್ಲಿ ಕಾರೊಂದು ಡಿಕ್ಕಿಯಾಗಿ ಯುವತಿ ಚೈತ್ರಾ ಮೃತಪಟ್ಟ ಘಟನೆಗೆ ಸಂಬಂಧಿಸಿ ಪರಾರಿಯಾದ ಆರೋಪಿಗಳನ್ನು ಬಂಧಿಸಿ ಸಮಗ್ರ ತನಿಖೆಗೊಳಪಡಿಸುವಂತೆ ವಿಶ್ವ ಹಿಂದೂ ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬಂಟ್ವಾಳ ನಗರ ಪೊಲೀಸರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಗಾಂಜಾ ಸೇವನೆ ಮಾಡಿ ಕಾರು ಓಡಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಗಂಭೀರ ಆರೋಪ ಸ್ಥಳೀಯರಿಂದ ಕೇಳಿ ಬಂದಿದ್ದು, ಈ ಬಗ್ಗೆ ಕಾರಿನಲ್ಲಿದ್ದ ಮೂವರನ್ನು ಬಂಧಿಸಿ ಸಮಗ್ರ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ, ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ, ಸಂದೇಶ್ ಕಾಡಬೆಟ್ಟು, ಲೋಹಿತ್ ಪಣೋಲಿಬೈಲ್ ಮತ್ತಿತರರು ಉಪಸ್ಥಿತರಿದ್ದರು.