Published On: Thu, Jan 4th, 2024

ಶಿಕ್ಷಣ ಮತ್ತು ಸಂಸ್ಕಾರದಿಂದ ಯಶಸ್ಸಿನ ಗುರಿ ತಲುಪಲು ಸಾಧ್ಯ :ಸಂತೋಷ್

ಬಂಟ್ವಾಳ: ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ರೂಡಿಸಿಕೊಂಡಲ್ಲಿ ಯಶಸ್ಸಿನ ಗುರಿ ತಲುಪಲು ಸಾಧ್ಯ ಎಂದು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯ ವಿಭಾಗದ ಸಂತೋಷ್ ಕುಲಾಲ್ ನೆತ್ತರಕೆರೆ ಹೇಳಿದರು.

ತುಂಬೆ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಳೇ ವಿದ್ಯಾರ್ಥಿಗಳ ನೆರವಿನೊಂದಿಗೆ ನಿರ್ಮಾಣವಾದ ಬಿಸಿಯೂಟದ ಉಪಹಾರ ಗೃಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಅಬ್ದುಲ್ ಸಲಾಂ ಮಾತನಾಡಿ, ಶಾಲೆಯಲ್ಲಿ ಸಿಗುವ ಸೌಲಭ್ಯ ಹಾಗೂ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿ ಉತ್ತಮ ಪ್ರಜೆಗಳಾಗಿ ಶಾಲೆಗೆ ಹಾಗೂ ಸಮಾಜಕ್ಕೆ ಹೆಸರು ತರಬೇಕೆಂದರು.

ನಿವೃತ್ತ ಮುಖ್ಯೋಪಾಧ್ಯಾಯ ಶ್ರೀನಿವಾಸ ಕೆದಿಲ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲ ಕೆ .ಎನ್ ಗಂಗಾಧರ ಆಳ್ವ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು, ತುಂಬೆ ವಿದ್ಯಾಸಂಸ್ಥೆಗಳ ಮ್ಯಾನೇಜರ್ ಅಬ್ದುಲ್ ಕಬೀರ್ ಬಿ ವಂದಿಸಿದರು, ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಬಿ.ಕಾರ್ಯಕ್ರಮ ನಿರೂಪಿಸಿದರು. ಯೋಗೀಶ್ ಹಾಗೂ ಅಶೋಕ್ ಸಹಕರಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter