ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಶನ್ ಕ್ಲಾಸ್ ಆರಂಭ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಬಂಟ್ವಾಳ ತಾಲೂಕು, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಶನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶಂಭೂರು ಬೊಂಡಲ ಜಗನ್ನಾಥ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಶಂಭೂರಿನ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪನಾಯಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಯೋಜನೆಯ ಮೂಲಕ ಶಿಕ್ಷಣಕ್ಕೆ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಜನ ಜಾಗೃತಿಯ ಸದಸ್ಯ ಪುರುಷೋತ್ತಮ ನಾಟಿ, ಅತಿಥಿ ಶಿಕ್ಷಕರಾದಂತಹ ಕು.ಹರ್ಷ, ಪ್ರಿಯ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಕಮಲಾಕ್ಷಿ ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಲಕ್ಷ್ಮಿ ಸ್ವಾಗತಿಸಿದರು, ಶಾಲಾ ಮುಖ್ಯೋಪಾಧ್ಯಾಯ ಕಮಲಾಕ್ಷ ವಂದಿಸಿದರು, ವಲಯ ಮೇಲ್ವಿಚಾರಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು.