ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿ.ಜಾ.ವೇ.ಪ್ರತಿಭಟನೆ
ಬಂಟ್ವಾಳ: ಹಿಂದು ಜಾಗರಣಾ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಹುಬ್ಬಳ್ಳಿಯಲ್ಲಿ ರಾಮ ಭಕ್ತರನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಮತ್ತು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುರುವಾರ ಸಂಜೆ ಬಿ.ಸಿ.ರೋಡು ಬಸ್ ನಿಲ್ದಾಣದ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

“ನಾನು ರಾಮಭಕ್ತ ..ನನ್ನನ್ನು ಬಂಧಿಸಿ”ಎಂಬ ಪೋಸ್ಟರ್ ಹಿಡಿದು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು.

ಹಿಂದು ಜಾಗರಣಾ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಚಾಲಕ ನರಸಿಂಹ ಮಾಣಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಸುದರ್ಶನ್ ಬಜ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಅವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿದರಲ್ಲದೆ ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರಾಣಪ್ರತಿಷ್ಠೆ ಸಂಭ್ರಮದಲ್ಲಿರುವ ಸಂದರ್ಭದಲ್ಲೇ ಹಿಂದೂ ಸಮಾಜದ ಮೇಲೆ ಸಿದ್ದರಾಮಯ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರಮುಖರಾದ ರವಿರಾಜ್ ಬಿ.ಸಿ.ರೋಡು, ಅಶೋಕ್ ಶೆಟ್ಟಿ ಸರಪಾಡಿ, ಪ್ರಭಾಕರ ಪ್ರಭು, ಪ್ರಶಾಂತ್ ಕೆಂಪುಗುಡ್ಡೆ, ಸಮಿತ್ ರಾಜ್ ಧರೆಗುಡ್ಡೆ, ಅರುಣ್ ಸಜೀಪ, ಗಣೇಶ್ ಕುಲಾಲ್ ಕೆದಿಲ, ದಿನೇಶ್ ದಂಬೆದಾರ್, ರಮಾನಾಥ ರಾಯಿ, ಹರೀಶ್ ತಲೆಂಬಿಲ, ರವಿ ಕೆಂಪುಗುಡ್ಡೆ, ಪ್ರಶಾಂತ್ ಇರಾ, ಶೇಖರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.