ಯೋಧರು, ಶಿಕ್ಷಕರನ್ನು ಗೌರವಿಸುವುದು ಪ್ರಶಂಸನೀಯ ಕಾರ್ಯ : ಎಸ್. ಆರ್.ಸತೀಶ್ಚಂದ್ರ
ಬಂಟ್ವಾಳ: ದೇಶ ಸೇವೆ ಮಾಡಿ ನಿವೃತ್ತರಾದ ಯೋಧರನ್ನು ಹಾಗೂ ಶಿಕ್ಷಕರನ್ನು ಗುರುತಿಸಿ ಗೌರವಿಸುವುದು ಪ್ರಶಂಸನೀಯ ಕಾರ್ಯವಾಗಿದೆ ಎಂದು ಪುತ್ತೂರು ಸರಸ್ವತಿ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಎಸ್. ಆರ್.ಸತೀಶ್ಚಂದ್ರ ಹೇಳಿದ್ದಾರೆ.
ತಾಲೂಕಿನ ಮೋಂತಿಮಾರು ಸ.ಹಿ ಪ್ರಾ.ಶಾಲೆಯಲ್ಲಿ ನಡೆದ ಶಾಲಾ 45ರ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್, ಮಾಜಿ ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಮಂಚಿ ಗ್ರಾ.ಪಂ.ಸದಸ್ಯರಾದ ಪುಷ್ಪಾಕಾಮತ್, ಪ್ರಭಾಕರ ಶೆಟ್ಟಿ, ಅನ್ಸಾರ್, ಪ್ರಾ.ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ
ಶಿವ ಪ್ರಸಾದ್ ಶೆಟ್ಟಿ, ಸಿ.ಅರ್.ಪಿ ಮಂಚಿ ಕ್ಲಸ್ಟರ್ ನ ಇಂದಿರಾ ಅತಿಥಿಗಳಾಗಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನುಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಎಂ.ಇಬ್ರಾಹಿಂ ವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ದೇವಕಿ ಹೆಚ್ ಸ್ವಾಗತಿಸಿ, ವರದಿ ವಾಚಿಸಿದರು. ಎಸ್. ಡಿ.ಎಂ.ಸಿ ಅಧ್ಯಕ್ಷ ಗಣೇಶ್ ಪ್ರಭು ವಂದಿಸಿದರು. ನಿವೃತ್ತ ಶಿಕ್ಷಕ ರಾಮಚಂದ್ರರಾವ್ ಕಾರ್ಯಕ್ರಮ ನಿರೂಪಣೆ ಮಾಡಿದರು