ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಸಹಿತ ವಿವಿಧ ಇಲಾಖೆಗಳು, ಶಿಕ್ಷಣ ಸಂಸ್ಥೆ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಕಾಲ್ನಡಿಗೆ ಮತ್ತು ಮ್ಯಾರಥಾನ್ ಅಭಿಯಾನ ಭಾನುವಾರ ಬಿ.ಸಿ.ರೋಡಿನ ಆಡಳಿತ ಸೌಧದ ಮುಂಭಾಗದಲ್ಲಿ ನಡೆಯಿತು.

ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿ ರಿಷ್ಯಂತ್ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಮಾದಕ ವಸ್ತುಗಳ ಸೇವನೆ, ಮಾರಾಟ ಮತ್ತು ಸಾಗಾಟ ಅಪರಾಧವಾಗಿದ್ದು, ಮಾದಕ ವಸ್ತುಗಳ ಸೇವನೆ ಮಾಡುವುದು ಕಂಡು ಬಂದಲ್ಲಿ ತಕ್ಷಣ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಬೇಕು, ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದೆ ತಮ್ಮ ಭವಿಷ್ಯವನ್ನು‌ರೂಪಿಸಿಕೊಳ್ಳಬೇಕು ಎಂದರು.

ಮಾದಕ ಸೇವನೆ ಮಾಡುವವರ ಮೇಲೆ ಪ್ರಕರಣ ದಾಖಲಿಸುವುದೊಂದೇ ನಮ್ಮ ಉದ್ದೇಶವಲ್ಲ, ಉತ್ತಮ ಸಮಾಜ ನಿರ್ಮಾಣಕ್ಕಾಗಿ  ಅನಿವಾರ್ಯವಾಗಿ ಕಾನೂನು ಬಾಹಿರ ಚಟುವಟಿಕೆಗಳನ್ನು ‌ನಿಯಂತ್ರಣ ಮಾಡುಬುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ ಅವರು
ಕಳೆದ ವರ್ಷದಿಂದ ಈ ವರ್ಷ ಮಾದಕ ವಸ್ತುಗಳ ಮಾರಾಟ ಮಾಡುವವರ ಸಂಖ್ಯೆ ಹೆಚ್ಚಳವಾಗಿದ್ದು, ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ಅಡಿಷನಲ್ ಎಸ್.ಪಿ.ಧರ್ಮಪ್ಪ, ಡಿ.ವೈ.ಎಸ್.ಪಿ.ವಿಜಯಪ್ರಕಾಶ್, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು. 

By suddi9

Leave a Reply

Your email address will not be published. Required fields are marked *