ಪಲ್ಲಿಪಾಡಿಯಲ್ಲಿ ಶಿಶು ಪಾಲನಾ ಕೇಂದ್ರದ ಉದ್ಘಾಟನಾ ಸಮಾರಂಭ
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಲ್ಲಿಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “ಶಿಶು ಪಾಲನಾ ಕೇಂದ್ರ/ ಕೂಸಿನ ಮನೆ”ಯ ಉದ್ಘಾಟನಾ ಸಮಾರಂಭವು ಜ.12ರಂದು ಶುಕ್ರವಾರ ನಡೆಯಿತು.

ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಧಾ ಲೋಕೇಶ್ ಕೂಸಿನ ಮನೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಗ್ರಾಂ.ಪಂ. ಉಪಾಧ್ಯಕ್ಷ ರಾಜು ಕೋಟ್ಯಾನ್ ಪಲ್ಲಿಪಾಡಿ, ಕರಿಯಂಗಳ ಗ್ರಾಂ.ಪಂ. ಮಾಜಿ ಅಧ್ಯಕ್ಷ ಚಂದ್ರಹಾಸ್ ಪಲ್ಲಿಪಾಡಿ, ಪಂಚಾಯತ್ ಸದಸ್ಯರಾದ ಲಕ್ಷ್ಮೀಶ್ ಶೆಟ್ಟಿ, ವೀಣಾ ಆಚಾರ್ಯ, ಪಿಡಿಓ ಮಾಲಿನಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ ನ ಲೆಕ್ಕ ಸಹಾಯಕರು, ಗ್ರಾಪಂ ಸಿಬ್ಬಂದಿಗಳು, ಕೂಸಿನ ಮನೆ ಶಿಶುಪಾಲನ ಕೇಂದ್ರದ ಕೇರ್ ಟೇಕರ್ಸ್, ಅಂಗನವಾಡಿ ಮೇಲ್ವಿಚಾರಕಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಂಥಾಲಯ ಮೇಲ್ವಿಚಾರಕಿ, ನರೇಗಾ ಮಹಿಳಾ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



ವಿಷಯ ಸೂಚನೆ:- ವಯೋಮಿತಿ 0-7 ತಿಂಗಳು ರಿಂದ 3 ವರ್ಷದ ಒಳಗಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳು ಶಿಶುಪಾಲನಾ ಕೇಂದ್ರಕ್ಕೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.