ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ವಿಟ್ಲ ಬಿಲ್ಲವ ಸಂಘ, ಬಿಲ್ಲವ ಮಹಿಳಾ ಘಟಕ ಮತ್ತು ಬಿಲ್ಲವ ಯುವ ವಾಹಿನಿ ಇವರ ವತಿಯಿಂದ ದೇವದಾಸ್ ಕಾಪಿಕಾಡ್ ರಚಿಸಿ ನಿರ್ದೇಶಿಸಿದ ನಾಟಕ ‘ಪುದರ್ ದೀದಾಂಡ್’ ನಾಟಕ ಪ್ರದರ್ಶನ ನಡೆಯಿತು.

ಈ ಕಾರ್ಯಕ್ರಮದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು, ವಿಟ್ಲ ಗ್ರಾಮೀಣ ಬ್ಯಾಂಕಿನ ಅಧ್ಯಕ್ಷ ಜಗನ್ನಾಥ ಸಾಲಿಯಾನ್, ಕೃಷ್ಣಯ್ಯ ಕೆ. ವಿಟ್ಲ ಅರಮನೆ, ನರಸಿಂಹ ವರ್ಮ ವಿಟ್ಲ ಅರಮನೆ, ಡಾ. ಗೀತ ಪ್ರಕಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಿಲ್ಲವ ಸಂಘದ ಅಧ್ಯಕ್ಷ ಮಾಧವ ಪಟ್ಲ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಶ್ರೀ ವಿವಿದ್ದೊದ್ದೇಶ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಂಜೀವ ನಿಡ್ಯ ಪ್ರಸ್ತಾವಿಸಿ ಸ್ವಾಗತಿಸಿದರು. ಬಿಲ್ಲವ ಸಂಘದ ಕಾರ್ಯದರ್ಶಿ ವಂದಿಸಿದರು. ಹರೀಶ್ ಕೆ. ವಿಟ್ಲ ನಿರೂಪಿಸಿದರು.