ಬಂಟ್ವಾಳ: ತಾಲೂಕಿನ‌ ಗೋಳ್ತಮಜಲು, ಬಾಳ್ತಿಲ, ನರಿಕೊಂಬು ಗ್ರಾಮ ಪಂಚಾಯತ್ ಗಳನ್ನೊಳಗೊಂಡ ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಂಟಿ ಸಲಹಾ ಸಮಿತಿ ಸಭೆ ನರಿಕೊಂಬು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಜಂಟಿ ಸಲಹಾ ಸಮಿತಿಯ ಅಧ್ಯಕ್ಷ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಕುಮಾರ್ ಆಯ್ಕೆಯಾಗಿ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಸಭೆಯಲ್ಲಿ ಮೂರು ಗ್ರಾಮ ಪಂಚಾಯತ್ ಗಳ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ  ಚರ್ಚಿಸಲಾಯಿತು.

ಸಮಸ್ಯೆಗಳಿಗೆ ಪರಿಹಾರೋಪಾಯಗಳ ಬಗ್ಗೆ ಹಾಗು ಬೇಸಿಗೆ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳಿಗೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆ ಬಗ್ಗೆ ಚರ್ಚಿಸಲಾಯಿತು, ಬಹುಗ್ರಾಮ ಸಮಿತಿಯ ಉಪಾಧ್ಯಕ್ಷರಾಗಿ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಅಣ್ಣು ಪೂಜಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಜಿ.ಕೆ. ನಾಯಕ್, ಗೊಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ, ಉಪಾಧ್ಯಕ್ಷ ಜಯಂತ್, ನರಿಕೊಂಬು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ ವಾಮನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಇಂಜಿನಿಯರ್ ಜಗದೀಶ್, ಮೆಸ್ಕಾಂ ಸಿಬಂದಿಗಳು, ರಾಷ್ಟ್ರೀಯ ಹೆದ್ದಾರಿ ಇಲಾಖಾ ಸಿಬ್ಬಂದಿಗಳು, ಪಂಪು ಚಾಲಕರು ಉಪಸ್ಥಿತರಿದ್ದರು.
ಸಮಿತಿಯ ಸಹ ಕಾರ್ಯದರ್ಶಿ, ನರಿಕೊಂಬು ಗ್ರಾಮ ಪಂಚಾಯತ್ ಅಧಿಕಾರಿ ಹರೀಶ್ ಕೆ.ಎ. ಸ್ವಾಗತಿಸಿ, ವಂದಿಸಿದರು 

By suddi9

Leave a Reply

Your email address will not be published. Required fields are marked *