ಕೈಕಂಬ: ಗುರುಪುರದ ಗೋಳಿದಡಿ ಗುತ್ತಿನ ‘ಗುತ್ತುದ ವರ್ಸೊದ ಪರ್ಬೊ’ ಪ್ರಯುಕ್ತ ಜ. 20ರಂದು ಶನಿವಾರ ಸಂಜೆ 6:00ಗಂಟೆಗೆ ಗುತ್ತಿನ ವರ್ಷದ ಒಡ್ಡೊಲಗದ ಧಾರ್ಮಿಕ ಸಭಾ ಕಾರ್ಯಕ್ರಮವು ಶ್ರೀ ವೈದ್ಯನಾಥೇಶ್ವರ ವೇದಿಕೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ವೇದ ವಿಜ್ಞಾನ ಮಂದಿರದ ಬ್ರಹ್ಮಋಷಿ ಶ್ರೀ ಕೆ.ಎಸ್. ನಿತ್ಯಾನಂದ ಗುರುಗಳು ಆಗಮಿಸಿದ್ದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ನಾಡುಗುತ್ತು ವಿದ್ಯಾಧರ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಪ್ರಾಧ್ಯಾಪಕ ಬಿ.ವಿ ಕುಮಾರಸ್ವಾಮಿ ಮೈಸೂರು ನೆರವೇರಿಸಿದರು. ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ತಿಂಗಳೆಬೀಡು ಇವರು ದಿಕ್ಸೂಚಿ ಭಾಷಣ ಮಾಡಿದರು ಹಾಗೂ ಗುರುಪುರ ಬೆಳ್ಳಿಬೆಟ್ಟುಗುತ್ತು ಸತೀಶ ಕಾವ, ಪೆರ್ಮುದೆ ಯಾದವ ಕೋಟ್ಯಾನ್, ಉಪನ್ಯಾಸಕಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಉದ್ಯಾವರ ಕಟಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಿವ್ಯಾ ಶೆಟ್ಟಿ ಸ್ವಾಗತಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಮಂಗಳೂರು ಸನಾತನ ನಾಟ್ಯಾಲಯದ ನೃತ್ಯಗುರು ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ ಮತ್ತು ವಿದುಷಿ ಶ್ರೀಲತಾ ನಾಗರಾಜ ಇವರ ಶಿಷ್ಯ ವೃಂದದವರಿAದ ಭರತನಾಟ್ಯ ಪ್ರದರ್ಶನಗೊಂಡಿತು.
