ದೇವತೆಗಳ ಉಪಾಸನೆಯ ಹಿಂದಿನ ಶಾಸ್ತ್ರವು ನಮಗೆ ತಿಳಿದರೆ ಉಪಾಸನೆ ಯನ್ನು ಹೆಚ್ಚು ಶ್ರದ್ಧೆಯಿಂದ ಮಾಡಲು ಸಹಾಯವಾಗುತ್ತದೆ. ಶ್ರದ್ಧಾಯುಕ್ತ ವಾಗಿ ಮಾಡಿದ ಉಪಾಸನೆಯಿಂದ ಒಳ್ಳೆಯ ಫಲವು ದೊರೆಯುತ್ತದೆ. ಹಾಗೆಯೇ ಉಪಾಸನೆಗೆ ಸಂಬಂಧಿಸಿದ ಕೃತಿಗಳು ಅಧ್ಯಾತ್ಮಶಾಸ್ತ್ರದ ದೃಷ್ಟಿ ಯಿಂದ ಯೋಗ್ಯವಾಗಿರುವುದು ಅವಶ್ಯಕವಾಗಿರುತ್ತದೆ. ಏಕೆಂದರೆ ಇಂತಹ ಕೃತಿಯಿಂದಲೇ ಹೆಚ್ಚು ಫಲವು ದೊರೆಯುತ್ತದೆ. ಈ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ದತ್ತನ ಉಪಾಸನೆಯ ಹಿಂದಿನ ಶಾಸ್ತ್ರ ಹಾಗೂ ಉಪಾಸನೆಗೆ ಸಂಬಂಧಿಸಿದ ಕೃತಿಗಳನ್ನು ಅಧ್ಯಾತ್ಮಶಾಸ್ತ್ರದ ದೃಷ್ಟಿಯಿಂದ ಯೋಗ್ಯರೀತಿಯಲ್ಲಿ ಹೇಗೆ ಮಾಡಬೇಕೆಂಬುದನ್ನು ಮುಂದೆ ನೀಡಲಾಗಿದೆ.
ಪೂಜೆಯ ಆರಂಭಿಕ ಕೃತಿಗಳ ಶಾಸ್ತ್ರ !
ದತ್ತನ ಪೂಜೆಯನ್ನು ಪ್ರಾರಂಭಿಸುವ ಮೊದಲು ಹಣೆಯ ಮೇಲೆ ಕಿರುಬೆರಳಿನ ಹತ್ತಿರದ ಬೆರಳಿನಿಂದ (ಅನಾಮಿಕದಿಂದ) ವಿಷ್ಣುವಿನಂತೆ ಎರಡು ಸರಳರೇಖೆಗಳಲ್ಲಿ ಗಂಧವನ್ನು ಹಚ್ಚಿಕೊಳ್ಳಬೇಕು. ಈ ರೀತಿ ಗಂಧವನ್ನು ಹಚ್ಚಿಕೊಳ್ಳುವುದರಿಂದ ದತ್ತತತ್ತ್ವದ ಲಾಭವು ಹೆಚ್ಚಿನ ಪ್ರಮಾಣದಲ್ಲಿ ಆಗುತ್ತದೆ. ಹಾಗೆಯೇ ಗಂಧದಲ್ಲಿನ ಸಾತ್ತ್ವಿಕತೆಯಿಂದ ಭಾವಜಾಗೃತಿಯಾಗಿ ಮನಸ್ಸು ಬೇಗನೆ ಏಕಾಗ್ರವಾಗುತ್ತದೆ. ಇದರಿಂದಾಗಿ ಪೂಜೆಯಿಂದ ಪ್ರಾಪ್ತವಾಗುವ ಚೈತನ್ಯವನ್ನು ಅಧಿಕ ಪ್ರಮಾಣದಲ್ಲಿ ಗ್ರಹಣ ಮಾಡಲು ಸಾಧ್ಯವಾಗುತ್ತದೆ. ದತ್ತನ ಪೂಜೆ ಮಾಡುವಾಗ ದತ್ತನಿಗೆ ಗಂಧವನ್ನು ಅನಾಮಿಕದಿಂದ ಹಚ್ಚಬೇಕು. ಹಾಗೆಯೇ ಬಲಗೈಯ ಹೆಬ್ಬೆರಳು ಮತ್ತು ಅನಾಮಿಕದಿಂದ ನಿರ್ಮಿಸಿದ ಚಿಟಿಕೆಯಿಂದ ದತ್ತನ ಚರಣಗಳಲ್ಲಿ ಮೊದಲು ಅರಿಶಿಣ ಆಮೇಲೆ ಕುಂಕುಮ ವನ್ನು ಅರ್ಪಿಸಬೇಕು. ನೈರ್ಮಲ್ಯವನ್ನು ತೆಗೆಯುವಾಗಲೂ ಹೆಬ್ಬೆರಳು ಮತ್ತು ಅನಾಮಿಕ ಬೆರಳುಗಳನ್ನೇ ಉಪಯೋಗಿಸಬೇಕು. ಹೆಬ್ಬೆರಳು ಮತ್ತು ಅನಾಮಿಕ ಈ ಬೆರಳುಗಳನ್ನು ಜೋಡಿಸುವುದರಿಂದಾಗುವ ಮುದ್ರೆಯಿಂದ ಶರೀರದಲ್ಲಿನ ಅನಾಹತ ಚಕ್ರವು ಜಾಗೃತವಾಗಿ ಭಕ್ತಿಭಾವವು ನಿರ್ಮಾಣವಾಗಲು ಸಹಾಯವಾಗುತ್ತದೆ.
ದತ್ತತತ್ತ್ವವನ್ನು ಆಕರ್ಷಿಸುವ ಬಣ್ಣ ಮತ್ತು ಸುಗಂಧ
ಜಾಜಿ ಮತ್ತು ನಿಶಿಗಂಧ ಹೂವುಗಳಲ್ಲಿ ದತ್ತತತ್ತ್ವವನ್ನು ಆಕರ್ಷಿಸುವ ಕ್ಷಮತೆಯು ಎಲ್ಲಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ದತ್ತನಿಗೆ ಈ ಹೂವುಗಳನ್ನು ಅರ್ಷಿಸುವುದರಿಂದ ದತ್ತತತ್ತ್ವದ ಲಾಭವು ಹೆಚ್ಚಿನ ಪ್ರಮಾಣದಲ್ಲಿ ಆಗುತ್ತದೆ. ದೇವತೆಗಳ ಚರಣಗಳಲ್ಲಿ ಹೂವುಗಳನ್ನು ವಿಶಿಷ್ಟ ಸಂಖ್ಯೆ ಗಳಲ್ಲಿ ಮತ್ತು ವಿಶಿಷ್ಟ ರಚನೆಯಲ್ಲಿ ಅರ್ಪಿಸುವುದರಿಂದ ಹೂವಿನ ಕಡೆಗೆ ಆಯಾಯ ದೇವತೆಗಳ ತತ್ತ್ವವು ಬೇಗನೆ ಆಕರ್ಷಿತವಾಗುತ್ತದೆ. ಈ ತತ್ತ್ವಕ್ಕನು ಸಾರ ದತ್ತನಿಗೆ ಹೂವುಗಳನ್ನು ಅರ್ಪಿಸುವಾಗ ಏಳು ಅಥವಾ ಏಳರ ಪಟ್ಟು ಗಳಲ್ಲಿ ಅಂದರೆ 7, 14, 21 ಇತ್ಯಾದಿ ಸಂಖ್ಯೆಗಳಲ್ಲಿ ಶಂಕರಪಾಳೆಯ (ಚತುಭರ್ುಜ) ಆಕಾರದಲ್ಲಿ ಅಪರ್ಿಸಬೇಕು. ವಿಶಿಷ್ಟ ದೇವತೆಗಳ ತತ್ತ್ವವು ವಿಶಿಷ್ಟ ಗಂಧದ ಕಡೆ ಬೇಗನೇ ಆಕಷರ್ಿತವಾಗುತ್ತದೆ. ಈ ತತ್ತ್ವಕ್ಕನುಸಾರ ದತ್ತನ ಪೂಜೆಯಲ್ಲಿ ಚಂದನ, ಕೇದಗೆ, ಮಲ್ಲಿಗೆ ಮತ್ತು ಜಾಜಿ ಈ ಪರಿಮಳದ ಊದುಬತ್ತಿಗಳನ್ನು ಉಪಯೋಗಿಸಿದರೆ ದತ್ತತತ್ತ್ವದ ಲಾಭವು ಹೆಚ್ಚಿನ ಪ್ರಮಾಣದಲ್ಲಿ ಆಗುತ್ತದೆ. ಆದುದರಿಂದ ದತ್ತನ ಪೂಜೆಯ ಸಂದರ್ಭ ದಲ್ಲಿ ಈ ಗಂಧದ ಊದುಬತ್ತಿಯನ್ನು ಉಪಯೋಗಿಸಿದರೆ ದತ್ತತತ್ತ್ವದ ಲಾಭವು ಹೆಚ್ಚಿನ ಪ್ರಮಾಣದಲ್ಲಿ ಆಗುತ್ತದೆ. ದತ್ತನೊಂದಿಗೆ ಇತರ ಎಲ್ಲ ದೇವತೆಗಳಿಗೆ ಎಷ್ಟು ಊದುಬತ್ತಿಯನ್ನು ಬೆಳಗಬೇಕು ಎನ್ನುವ ಶಾಸ್ತ್ರವು ಮುಂದಿನಂತಿದೆ. ಒಂದು ಎಂಬುದು ಅದ್ವೆ ತದ ಪ್ರತೀಕವಾದರೆ ಎರಡು ದ್ವೆ ತದ ಪ್ರತೀಕವಾಗಿದೆ. ಪ್ರಾಥಮಿಕ ಹಂತದಲ್ಲಿ ಉಪಾಸಕನು ದೇವರು ಮತ್ತು ತಾನು ಹೀಗೆ ದ್ವೆ ತದ ಸ್ಥಿತಿಯನ್ನು ಅನುಭವಿಸುತ್ತಿರುತ್ತಾನೆ; ಆದ್ದರಿಂದ ಅವನು ಎರಡು ಊದುಬತ್ತಿಗಳನ್ನು ಬೆಳಗುವುದು ಹೆಚ್ಚು ಯೋಗ್ಯವಾಗಿದೆ. ಉಪಾಸಕನು ಭಕ್ತಿಯ ಮುಂದಿನ ಹಂತದಲ್ಲಿ ಒಂದು ಊದುಬತ್ತಿಯನ್ನು ಬೆಳಗಬಹುದು. ದೇವರಿಗೆ ಊದುಬತ್ತಿಯನ್ನು ಬೆಳಗುವಾಗ ಅದನ್ನು ತನ್ನ ಬಲಗೈಯ ತೋರುಬೆರಳು ಮತ್ತು ಹೆಬ್ಬೆರಳಿನಿಂದ ಹಿಡಿದು ಗಡಿಯಾರದ ಮುಳ್ಳುತಿರುಗುವ ದಿಶೆಯಲ್ಲಿ ಮೂರು ಬಾರಿ ಬೆಳಗಬೇಕು.
ದತ್ತ ಜಯಂತಿಯ ಮಹತ್ವ
ದತ್ತಜಯಂತಿ
ದತ್ತ ಜಯಂತಿಯು ಹಿಂದೂ ಗಳ ಧಾಮರ್ಿಕ ಹಬ್ಬವಾಗಿದ್ದು ಅದನ್ನು ಶ್ರೀ ಗುರುದತ್ತಾತ್ರೇಯನ ಜನ್ಮದ ದಿನದಂದು ಅಂದರೆ ಈ ಪೃಥ್ವಿಯ ಮೇಲೆ ದತ್ತತತ್ತ್ವವು ಜಾಗೃತವಾದ ದಿನದಂದು ಆಚರಿಸಲಾಗುತ್ತದೆ. ಇದನ್ನು ಹಿಂದೂ ಕಾಲಗಣನೆಗನುಸಾರ ಮಾರ್ಗಶಿರ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನದಂದು ದತ್ತತತ್ತ್ವವು ಎಂದಿಗಿಂತ ಅನೇಕ ಪಟ್ಟು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ. ಈ ತತ್ತ್ವವನ್ನು ಹೆಚ್ಚು ಪ್ರಮಾಣದಲ್ಲಿ ಆಕರ್ಷಿಸಲು ದತ್ತನ ನಾಮಜಪವನ್ನು ಮಾಡಬೇಕು.
ದತ್ತಜಯಂತಿಯಂದು ದತ್ತತತ್ತ್ವವನ್ನು ಹೆಚ್ಚು ಪ್ರಮಾಣದಲ್ಲಿ ಪಡೆಯಲು `ಶ್ರೀ ಗುರುದೇವ ದತ್ತ’ ಈ ನಾಮಜಪವನ್ನು ಮಾಡಿರಿ.
(ಆಧಾರ : ಸನಾತನವು ಪ್ರಕಾಶಿಸಿದ ಕಿರುಗ್ರಂಥ `ದತ್ತ’)


