ಕರಿಯಂಗಳ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ
ಕೈಕಂಬ: ಪೊಳಲಿ ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಗಿರೀಶ್ ನಾವಡ ಹಾಗೂ ತಂಡದವರಿಂದ ಫೆ.1ರಂದು ಗುರುವಾರ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕರಿಯಂಗಳ ಗ್ರಾಂ.ಪಂ ಅಧ್ಯಕ್ಷೆ ರಾಧಾ ಲೋಕೇಶ್, ಉಪಾಧ್ಯಕ್ಷ ರಾಜು ಕೋಟ್ಯಾನ್, ಮಾಜಿ ಗ್ರಾಂ.ಪಂ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ, ಕರಿಯಂಗಳ ಗ್ರಾಂ.ಪಂ. ಮಾಜಿ ಉಪಾಧ್ಯಕ್ಷೆ ವೀಣಾ ಆಚಾರ್ಯ, ಕರಿಯಂಗಳ ಗ್ರಾಂ.ಪಂ. ಸದಸ್ಯರು, ಕರಿಯಂಗಳ ಗ್ರಾಂ.ಪಂ. ಕಾರ್ಯದರ್ಶಿ, ಕರಿಯಂಗಳ ಗ್ರಾಂ.ಪಂ. ಸಿಬ್ಬಂದಿ ವರ್ಗ, ಅಂಗನವಾಡಿ ಕೇಂದ್ರದ ಶಿಕ್ಷಕಿಯರು, ಸ್ಥಳೀಯ ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಕರಿಯಂಗಳ ಗ್ರಾಂ.ಪಂ ಉಪಾಧ್ಯಕ್ಷ ರಾಜು ಕೋಟ್ಯಾನ್ ವಂದಿಸಿದರು.