ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ, ಪ್ರತಿಷ್ಠಾ ವರ್ಧಂತಿ ಮಹೋತ್ಸವ
ಕೈಕಂಬ: ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಫೆ.6ರಂದು ಮಂಗಳವಾರ ನಡೆಯಲಿದೆ.

ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ದೇವಳದಲ್ಲಿ ಬೆಳಗ್ಗೆ ಪುಣ್ಯಾಹ, ಗಣಯಾಗ, ನವಕ ಕಲಶ, ಪ್ರಧಾನ ಹೋಮ, ಕಲಶಾಭಿಷೇಕ ಹಾಗೂ ಮಧ್ಯಾಹ್ನ 12:00ಗಂಟೆಗೆ ಮಹಾಪೂಜೆ ನೆರವೇರಲಿದೆ.
ಬಳಿಕ ಮಧ್ಯಾಹ್ನ 2:00ರಿಂದ ಸಂಜೆ 6:00ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ 6:30ರಿಂದ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳದವರಿಂದ ಕಾಲಮಿತಿಯ “ದಮಯಂತಿ ಪುನಃ ಸ್ವಯಂವರ ಗದಾಯುದ್ಧಾ ರಕ್ತರಾತ್ರಿ” ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಹಾಗೂ ಆಡಳಿತ ಸಮಿತಿ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.