ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನ ದಾರುಣ ಮೃತ್ಯು
ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ಬಿ.ಸಿ.ರೋಡಿಗೆ ಸಮೀಪದ ಮಾರ್ನಬೈಲು ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು ಪ್ರಸ್ತುತ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ದಾಸರ ಗುಡ್ಡೆ ಎಂಬಲ್ಲಿ ವಾಸ್ತವ್ಯವಿರುವ ಹರಿಶ್ಚಂದ್ರ (37) ಮೃತಪಟ್ಟವರೆಂದು ಗುರುತಿಸಲಾಗಿದೆ.

ಬೆಳಿಗ್ಗೆ ಸುಮಾರು7.30 ರ ಹೊತ್ತಿಗೆ ಮನೆಯಿಂದ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟಲೆಂದು ನಿಂತಿದ್ದ ವೇಳೆ ರೈಲು ಡಿಕ್ಕಿಯಾಗಿರಬೇಕೆಂದು ಸ್ಥಳೀಯರು ತಿಳಿಸಿದ್ದಾರೆ.
ಪರಿಣಾಮ ಗಂಭೀರವಾಗಿ ಗಾಯಗೊಂಡ ಹರಿಶ್ಚಂದ್ರ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರೈಲ್ವೆ ಇಲಾಖೆಯ ಹಳಿಯ ಕಾಮಗಾರಿ ನೋಡಿಕೊಳ್ಳುವ ಸಿಬ್ಬಂದಿಗಳು ಇದನ್ನು ಗಮನಿಸಿ ಮಂಗಳೂರು ರೈಲ್ವೆ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ರೈಲ್ವೆ ಪೋಲೀಸ್ ಇಲಾಖೆಯ ಎ.ಎಸ್.ಐ.ಜಾನ್ ಕೊರಿಯ ಕೋಸ್ ಸ್ಥಳಕ್ಕಾಗಮಿಸಿ ಪರಿಶೀಲನೆನಡೆಸಿ ಮುಂದಿನ ಕ್ರಮ ಕೈಗೊಂಡರು.