ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಬ್ರಹ್ಮಕಲಶ ಪುಣ್ಯೋತ್ಸವಕ್ಕೆ ಚಪ್ಪರ ಮುಹೂರ್ತ
ಕೈಕಂಬ: ಮಟ್ಟಿ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಫೆ.೨೦ರಿಂದ ಫೆ.೨೬ರ ವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಪುಣ್ಯೋತ್ಸವದ ಚಪ್ಪರ ಮುಹೂರ್ತ ಕಾರ್ಯಕ್ರಮವು ಫೆ.೭ರಂದು ಬುಧವಾರ ಬ್ರಹ್ಮಶ್ರೀ ದೇರೆಬೈಲ್ ವಿಠಲದಾಸ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಉಮೇಶ್‌ನಾಥ್ ಕದ್ರಿಯವರ ಉಪಸ್ಥಿತಿಯಲ್ಲಿ ನೆರವೇರಿತು.


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಮಟ್ಟಿಯ ಪ್ರಧಾನ ಅರ್ಚಕ ಉಮೇಶ್ ನಾಥ್ ಕದ್ರಿ, ಶ್ರೀ ಕ್ಷೇತ್ರ ಮಟ್ಟಿ ಆಡಳಿತ ಮೊಕ್ತೇಸರ ಗಂಗಾಧರ ಜೋಗಿ ಮಟ್ಟಿ, ಬ್ರಹ್ಮಕಲಶ ಸಮಿತಿ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ ನಾರಳ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಖರ ಜೋಗಿ, ಬ್ರಹ್ಮಕಲಶ ಸಮಿತಿ ಕೋಶಾಧಿಕಾರಿ ಸೋಹನ್ ಅತಿಕಾರಿ ಭಾವಂತಿಬೆಟ್ಟು, ಬ್ರಹ್ಮಕಲಶ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಮಟ್ಟಿ ಹಾಗೂ ಸತೀಶ್ ಜೋಗಿ ಮಾಲೆಮಾರ್ ಉಪಸ್ಥಿತರಿದ್ದರು.


