ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಪುನಃ ಪ್ರತಿಷ್ಠೆ ಅಷ್ಟಬಂಧ,ಬ್ರಹ್ಮಕಲಶಾಭಿಷೇಕ, ಧ್ವಜಸ್ತಂಭ ಪ್ರತಿಷ್ಠೆ ಹಾಗೂ ಜಾತ್ರಾ ಮಹೋತ್ಸವವು ಫೆ. 13ರಿಂದ 23ರ ವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಿತು‌.

ಬಿ.ಸಿ.ರೋಡ್‌ನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಬಳಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು.

ಜೀರ್ಣೋದ್ದಾರ-ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅಧ್ಯಕ್ಷತೆ ವಹಿಸಿದ್ದರಜ  ಹೊರೆಕಾಣಿಕೆ ಸಮಿತಿ ಸಂಚಾಲಕ ಪ್ರಕಾಶ್ ಬಿ.ಶೆಟ್ಟಿ,ಶ್ತೀ ರಕ್ತೇಶ್ವರೀ ದೇವಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ್ ಸೇರಿದಂತೆ ವಿವಿಧ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *