ಎಳ್ಳಾರೆ: ಉಚಿತ ಆರೋಗ್ಯ ತಪಾಸಣಾ ಶಿಬಿರ
ಕೈಕಂಬ: ಶ್ರೀ ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜು, ಉಡುಪಿಯ ಎನ್ನೆಸ್ಸೆಸ್ ಶಿಬಿರದ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಸ್ಥಳೀಯ ವೈದ್ಯರಾದ ಡಾ.ಪ್ರಮೋದ್ ಕುಮಾರ್ ಹೆಗ್ಡೆ ಶಿಬಿರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೇರಂಗಡಿಯ ವೈದ್ಯಾಧಿಕಾರಿಗಳಾದ ಡಾ.ಚಂದ್ರಿಕಾ ಕಿಣಿ, ಕಾರ್ಕಳ ರೋಟರಿ ಆಸ್ಪತ್ರೆಯ ಡಾ.ಅನುಪಾ, ಕಡ್ತಲ ಗ್ರಾ.ಪಂ ಅಧ್ಯಕ್ಷ ಸುಕೇಶ್ ಹೆಗ್ಡೆ, ಲಯನ್ಸ್ ಕ್ಲಬ್ ಅಧ್ಯಕ್ಷ ಮಂಜುನಾಥ್, ಎನ್ನೆಸ್ಸೆಸ್ ಯೋಜನಾಧಿಕಾರಿಗಳಾದ ಚಿರಂಜನ್ ಶೇರಿಗಾರ್, ಡಾ.ಪ್ರಜ್ಞಾ ಮಾರ್ಪಳ್ಳಿ, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಸಂಸ್ಥಾಪಕರಾದ ದೇವೇಂದ್ರ ಕಾಮತ್ ಉಪಸ್ಥಿತರಿದ್ದರು.
ಕು.ಪ್ರಜ್ಞಾ ಸ್ವಾಗತಿಸಿದರು, ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.