ಕೈಕಂಬ: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್‌ ಪ್ರಸಾದ್‌ ಮಾರ್ಚ್‌ 1ರಂದು ಶುಕ್ರವಾರ ನಿಧನರಾಗಿದ್ದಾರೆ.

ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ್‌ ಪ್ರಸಾದ್‌ ಮಂಗಳೂರಿನ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರ್ತಿಗೊಳಿಸಿದ ಬಳಿಕ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಬಿಸಿದ್ದರು.

ಬಳಿಕ ಉದಯವಾಣಿ ವರದಿಗಾರರಾಗಿ ಸೇರ್ಪಡೆಗೊಂಡು ಅಲ್ಲಿಂದ ಮುಖ್ಯ ವರದಿಗಾರರಾಗಿ ಪ್ರಮೋಷನ್‌ ಪಡೆದು ಬಳಿಕ ಬ್ಯೂರೋ ಚೀಫ್‌ ಆಗಿ, ಸಹಾಯಕ ಸಂಪಾದಕರಾಗಿ ಉದಯವಾಣಿಯಲ್ಲಿ ಸತತ 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷಗಳ ಹಿಂದೆ ನಿವೃತ್ತಿಗೊಂಡಿದ್ದರು.

By Suddi9

Leave a Reply

Your email address will not be published. Required fields are marked *