ಬಂಟ್ವಾಳ: ಬಿಜೆಪಿ ಪ್ರಮುಖರ ಸಭೆ
ಬಂಟ್ವಾಳ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಪದಾಧಿಕಾರಿಗಳು ವಿವಿಧ ಮೋರ್ಚಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳ ಸಭೆಯು ಬಿ ಸಿ ರೋಡಿನಲ್ಲಿರುವ ಬಿಜೆಪಿ ಕಛೇರಿಯಲ್ಲಿ ಶುಕ್ರವಾರ ನಡೆಯಿತು.
ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿಯವರ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮಗಳ ಜಿಲ್ಲಾ ಸಂಚಾಲಕ ವಿಕಾಸ್ ಪುತ್ತೂರು ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪ್ರತಿ ಬೂತಿನಲ್ಲಿ ಗೋಡೆ ಬರಹ, ಶಕ್ತಿ ವಂದನ ಹಾಗೂ ಫಲಾನುಭವಿಗಳ ಸಂಪರ್ಕ ಕಾರ್ಯಕ್ರಮ ಅನುಷ್ಠಾನ ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಮಂಡಲದ ಪ್ರಭಾರಿಯಾಗಿ ಜಿಲ್ಲೆಯಿಂದ ನಿಯುಕ್ತಿಗೊಂಡ ಜಗದೀಶ್ ಶೇಣವ ಅವರನ್ನು ಈ ಸಂದರ್ಭ ಅಭಿನಂದಿಸಲಾಯಿತು.
ಬಳಿಕ ಮಾತನಾಡಿದ ಜಗದೀಶ ಶೇಣವ ಅವರು ಮತ್ತೊಮ್ಮೆ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗುವುದು ನಿಶ್ಚಿತ. ಬಂಟ್ವಾಳ ಕ್ಷೇತ್ರದಲ್ಲಿ ಶಾಸಕ ರಾಜೇಶ್ ನಾಯ್ಕ್ ರವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದ್ದು ಪಕ್ಷದ ಪ್ರಮುಖರು, ಕಾರ್ಯಕರ್ತರು, ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿಯಲ್ಲಿ ಮುಂದಿನ 50 ದಿನ ಪಕ್ಷದ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಸಭೆಯಲ್ಲಿ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕಾರ್ಕಳ, ರಾಮದಾಸ್ ಬಂಟ್ವಾಳ ಉಪಸ್ಥಿತರಿದ್ದರು.