ನಾವೂರು: 13ನೇ ವರ್ಷದ ‘ಮೂಡೂರು- ಪಡೂರು ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
ಕಂಬಳ ಕೃಷಿಕರ ಶಿಸ್ತುಬದ್ಧ ಜಾನಪದ ಕ್ರೀಡೆ: ಸಚಿವ ದಿನೇಶ ಗುಂಡೂರಾವ್
ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಕೃಷಿಕರು ಪ್ರೀತಿಯಿಂದ ಸಾಕಿದ ಓಟದ ಕೋಣಗಳನ್ನು ಕ್ರಮಬದ್ಧವಾಗಿ ಕಂಬಳ ಕ್ರೀಡೆಯಲ್ಲಿ ಸ್ಪರ್ಧಾತ್ಮಕವಾಗಿ ತೊಡಗಿಸಿಕೊಳ್ಳುವ ಮೂಲಕ ಶಿಸ್ತುಬದ್ಧ ಜಾನಪದ ಕ್ರೀಡೆಯಾಗಿ ರಾಜಧಾನಿಯಲ್ಲಿಯೂ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ.

ಇಲ್ಲಿನ ನಾವೂರು ಗಾಮದ ಕೂಡಿಬೈಲು ಎಂಬಲ್ಲಿ ಶನಿವಾರ ಆರಂಭಗೊಂಡ ಹೊನಲು ಬೆಳಕಿನ 13ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ನ ಧರ್ಮಗುರು ಫೆಡ್ರಿಕ್ ಮೊಂತೆರೋ ಅದ್ದೂರಿ ಕಂಬಳಕ್ಕೆ ಚಾಲನೆ ನೀಡಿದರು. ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಎಲ್ಲಾ ಜಾತಿ ಧರ್ಮಗಳ ಜನತೆ ತನ್ನತ್ತ ಕೈ ಬೀಸಿ ಕರೆಯುವಂತೆ ಮೂಡೂರು-ಪಡೂರು ಕಂಬಳ ನಡೆಯುತ್ತಿದೆ’ ಎಂದರು. .
ಉದ್ಯಮಿ ಬಿ.ರಘುನಾಥ ಸೋಮಯಾಜಿ, ನಮ್ಮ ಕುಡ್ಲ ವಾಹಿನಿ ನಿರ್ಧೇಶಕ ಲೀಲಾಕ್ಷ ಕರ್ಕೇರಾ, ಗೇರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ ಶುಭ ಹಾರೈಸಿದರು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮಾಜಿ ಶಾಸಕ ಮೊಯ್ದಿನ್ ಬಾವ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಣಿ ಸಾಗು ಉಮೇಶ್ ಶೆಟ್ಟಿ, ಲಿಯೋ ಫೆರ್ನಾಂಡಿಸ್ ಸರಪಾಡಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಾಜಿ ಸದಸ್ಯ ಕೃಷ್ಣಮೂರ್ತಿ ಭಟ್, ಉದ್ಯಮಿ ಬಾಲಕೃಷ್ಣ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ರೈ, ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಅಬ್ಬಾಸ್ ಅಲಿ, ಪರಿಶಿಷ್ಟ ಪಂಗಡ ಜಿಲ್ಲಾ ಘಟಕ ಅಧ್ಯಕ್ಷ ನಾರಾಯಣ ನಾಯ್ಕ್, ಕಾಂಗ್ರೆಸ್ ಸೇವಾದಳ ಘಟಕ ಅಧ್ಯಕ್ಷ ಜೋಕಿಂ ಡಿಸೋಜಾ, ಐತಪ್ಪ ಆಳ್ವ ಸುಜೀರುಗುತ್ತು, ಪ್ರವೀಣ್ ಆಳ್ವ ಮುಡಿಪು, ಸಮಿತಿ ಸಂಚಾಲಕ ಬಿ.ಪದ್ಮಶೇಖರ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಉಪಾಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಕೆ.ಮಾಯಿಲಪ್ಪ ಸಾಲ್ಯಾನ್, ಅವಿಲ್ ಮಿನೇಜಸ್, ರಾಜೇಶ ರಾಡ್ರಿಗಸ್, ಶಬೀರ್ ಸಿದ್ಧಕಟ್ಟೆ, ಉಮೇಶ ಕುಲಾಲ್, ಕೆ.ಪದ್ಮನಾಭ ರೈ, ಪ್ರವೀಣ ಜಕ್ರಿಬೆಟ್ಟು, ವೆಂಕಪ್ಪ ಪೂಜಾರಿ ಮತ್ತಿತರರು ಇದ್ದರು.
ಕಂಬಳ ಸಮಿತಿ ಅಧ್ಯಕ್ಷ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.