ಬಂಟ್ವಾಳ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ॥ ಅಶೋಕ್ ಕುಮಾರ್ ರೈ ಅವರು ಮಕ್ಕಳಿಗೆ ಪೋಲಿಯೋ ಹನಿಯನ್ನು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ತಾಲೂಕು ಆರೋಗ್ಯಾಧಿಕಾರಿ ಬಂಟ್ವಾಳ ತಾಲೂಕಿನಲ್ಲಿ 0-5 ವರ್ಷದ 30651 ಮಕ್ಕಳಿಗೆ ಪೋಲಿಯೋ ಹನಿ ನೀಡಬೇಕಾಗಿದ್ದು, ತಾಲೂಕಿನಾದ್ಯಂತ 190 ಬೂತ್‌ಗಳನ್ನು ತೆರೆಯಲಾಗಿದೆ.
ಇದರಲ್ಲಿ 784 ಕಾರ್ಯಕರ್ತೆಯರು ಲಸಿಕಾದಾರರಾಗಿ ಭಾಗವಹಿಸಲಿದ್ದಾರೆ. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಲ್ಲಿ ಪೋಲಿಯೋ ಬೂತ್‌ಗಳನ್ನು ತೆರೆಯಲಾಗಿದ್ದು 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ನೀಡುವಂತೆ ಪ್ರಕಟಣೆಯಲ್ಲಿ ಕೋರಿದರು.