Published On: Wed, Mar 20th, 2024

ಬ್ರಹ್ಮಶ್ರೀ ನಾರಾಯಣ ಗುರುಗಳ ನೂತನ ಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ


ಕೈಕಂಬ: ಬಡಗಬೆಳ್ಳೂರು ಕೊಳತ್ತಮಜಲು ಗುರುಮಂದಿರದಲ್ಲಿ ಮಾ.೨೪ರಂದು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರುಗಳ ನೂತನ ಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕವು ಬಿಲ್ಲವರ ಸಮಾಜ ಸೇವಾ ಸಂಘ(ರಿ) ಪಂಚಗ್ರಾಮ ಇದರ ನೇತೃತ್ವದಲ್ಲಿ ನಡೆಯಲಿದೆ.

ಮಾ.೨೩ರಂದು ಶನಿವಾರ ಕುದ್ರೋಳಿ ಶ್ರಿ ಗೋಕರ್ಣನಾಥ ಕ್ಷೇತ್ರದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ನೂತನ ಬಿಂಬವನ್ನು ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನಕ್ಕೆ ತರಲಾಗುವುದು. ಬಳಿಕ ದೇವಸ್ಥಾನದಿಂದ ಹೊರೆ ಕಾಣಿಕೆ ಹಾಗೂ ನಾರಾಯಣ ಗುರುದೇವರ ಮೂರ್ತಿಯನ್ನು ಕುಣಿತ ಭಜನೆ, ಚೆಂಡೆ ವಾದನ, ಪೂರ್ಣ ಕುಂಭ ಸ್ವಾಗತದೊಂದಿಗೆ ಅದ್ದೂರಿ ಮೆರವಣಿಗೆಯ ಮೂಲಕ ಕೊಳತ್ತಮಜಲು ಗುರುಮಂದಿರಕ್ಕೆ ಬರಲಿದೆ.

ಬ್ರಹ್ಮಶ್ರೀ ನಾರಾಯಣ ಗುರುಗಳ ಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ ಧಾರ್ಮಿಕ ವಿಧಿ ವಿಧಾನಗಳು ಎಂ.ಲೋಕೇಶ್ ಶಾಂತಿ ಮಂಗಳೂರು ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಮಾ.೨೪ರಂದು ಬೆಳಗ್ಗೆ ೧೧:೪೫ಕ್ಕೆ ಧಾರ್ಮಿಕ ಸಭಾಕಾರ್ಯಕ್ರಮ ನಡೆಯಲಿದ್ದು ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.

ಅಜಿನಡ್ಕದ ಜ್ಞಾನದೇಗುಲ ಶ್ರೀ ರಾಘವೇಂದ್ರ ಮಠದ ಶ್ರೀ ಶಂಕರ್ ಸ್ವಾಮೀಜಿಯ ಉಪಸ್ಥಿತಿಯಲ್ಲಿ ಮಾಜಿ ಶಾಸಕ ಎ. ರುಕ್ಕಯ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಳ್ಳೂರು ಕಾವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಘು ಎಲ್. ಶೆಟ್ಟಿ, ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಉಪಾಧ್ಯಕ್ಷ ಸೋಮನಾಥ್ ಬಿ. ಅಮೀನ್, ಬಿಲ್ಲವ ಸಮಾಜ ಸೇವಾ ಸಂಘ ಬಂಟ್ವಾಳ ತಾಲೂಕು ಇದರ ಅಧ್ಯಕ್ಷ ಸಂಜೀವ ಪೂಜಾರಿ, ಉಪಾಧ್ಯಕ್ಷ ಭುವನೇಶ್ ಎಸ್. ಕೋಟ್ಯಾನ್ ಪಚ್ಚಿನಡ್ಕ, ಶ್ರೀ ದುರ್ಗಾಪರಮೇಶ್ವರೀ ಭದ್ರಕಾಳಿ ದೇವಸ್ಥಾನ ಅರಳದ ಆಡಳಿತ ಮೊಕ್ತೇಸರ ಜನಾರ್ಧನ ಶಾಂತಿ, ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಮುಂಬೈ ಲಿ. ನ ನಿರ್ದೇಶಕರು ಸುರೇಶ್ ಸುವರ್ಣ, ಸಂತೋಷ್ ಪೂಜಾರಿ, ಗಣೇಶ್ ಡಿ. ಪೂಜಾರಿ, ಬಡಗಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ಶ್ರೀ ನಾರಾಯಣ್ ನೈಕ್ ಹಾಗೂ ಬಡಗಬೆಳ್ಳೂರು ಗ್ರಾಂ.ಪಂ. ಉಪಾಧ್ಯಕ್ಷ ಚಂದ್ರಹಾಸ ಪೂಜಾರಿ ಕಾಗುಡ್ಡೆ ಮುಖ್ಯ ಅಥಿತಿಗಳಾಗಿ ಆಗಮಿಸಲಿದ್ದಾರೆ.

ಭಗವದ್ಭಕ್ತರು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಗುರುದೇವರ ಕೃಪೆಗೆ ಪಾತ್ರರಾಗಬೇಕಾಗಿ ಬಿಲ್ಲವರ ಸಮಾಜ ಸೇಔಆ ಸಂಘ ಪಂಚಗ್ರಾಮದ ಅಧ್ಯಕ್ಷ ಗಮಗಾಧರ ಜೆ. ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter