ಚುನಾವಣಾ ನಿರ್ವಹಣಾ ಸಮಿತಿ ಪ್ರಥಮ ಸಭೆ
ಬಂಟ್ವಾಳ: ಬಂಟ್ವಾಳ ಮಂಡಲದ ಚುನಾವಣಾ ನಿರ್ವಹಣಾ ಸಮಿತಿಯ ಪ್ರಪ್ರಥಮ ಸಭೆಯು ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾದ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಬಿ ಸಿ ರೋಡು ಬಿಜೆಪಿ ಕಛೇರಿಯಲ್ಲಿ ಜರಗಿತು.
ಸಭೆಯಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್ ಕುಮಾರ್, ಕ್ಷೇತ್ರ ಚುನಾವಣೆ ಪ್ರಭಾರಿ ಗಳಾದ ಜಗದೀಶ್ ಶೆಣವ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ, ಪ್ರಮುಖರಾದ ದೇವದಾಸ್ ಶೆಟ್ಟಿ, ರಾಮದಾಸ್ ಬಂಟ್ವಾಳ, ಸಂದೇಶ್ ಶೆಟ್ಟಿ, ಮಾಧವ ಮಾವೆ ಹಾಗೂ ಚುನಾವಣೆ ನಿರ್ವಹಣಾ ಸಮಿತಿಯ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.