ಒಡ್ಡೂರು ಫಾರ್ಮ್ ಹೌಸ್ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಕೋರು ಕಮಿಟಿ ಸಭೆ
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಕೋರು ಕಮಿಟಿ ಸಭೆಯು ಮಾ.21ರಂದು ಗುರುವಾರ ಬೆಳಿಗ್ಗೆ 11.00 ಗಂಟೆಗೆ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಉಪಸ್ಥಿತಿಯಲ್ಲಿ ಹಾಗೂ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಒಡ್ಡೂರು ಫಾರ್ಮ್ ಹೌಸ್ ನಲ್ಲಿ ಜರಗಿತು.

ಕ್ಷೇತ್ರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚೆನ್ನಪ್ಪ ಕೋಟ್ಯಾನ್ ರವರಿಗೆ ದೇವಪ್ಪ ಪೂಜಾರಿಯವರು ಪಕ್ಷದ ಶಾಲು ಹಾಕಿ ಜವಾಬ್ದಾರಿಯನ್ನು ಹಸ್ತಾಂತರ ಮಾಡಿದರು.

ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ, ಪ್ರಮುಖರಾದ ದೇವದಾಸ್ ಶೆಟ್ಟಿ, ರಾಮದಾಸ್ ಬಂಟ್ವಾಳ, ಜಗದೀಶ್ ಶೆಣವ ಉಪಸ್ಥಿತರಿದ್ದರು.