ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ನಿಂದ ಶಿಕ್ಷಣಕ್ಕೆ ಪ್ರೋತ್ಸಾಹ
ಕೈಕಂಬ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದೊಂದಿಗೆ ಶಿಕ್ಷಣ ನೀಡುವ ಆಶಯದೊಂದಿಗೆ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಗೆ ಲ್ಯಾಪ್ಟಾಪ್ ಮತ್ತು ಪ್ರಾಜೆಕ್ಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಸಂಸ್ಥೆಯ ಜನರಲ್ ಮ್ಯಾನೇಜರ್ ರೋನಾಲ್ಡ್ ಡಿಸೋಜಾ ಉಪಸ್ಥಿತರಿದ್ದರು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ವೆಂಕಟೇಶರವರು ಶಾಲೆಯ ಪರವಾಗಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಮುಖ್ಯ ಶಿಕ್ಷಕರಾದ ಸುಬ್ರಾಯ ಪ. ಎನ್. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೂರ್ಣಿಮಾ ಸರ್ವರನ್ನು ಸ್ವಾಗತಿಸಿದರೆ ಶಾಂತ ಧನ್ಯವಾದ ಹಾಗೂ ರಂಜಿತಾ ನಿರೂಪಣೆ ಮಾಡಿದರು