ಶ್ರೀ ರಾಜರಾಜೇಶ್ವರೀ ಸನ್ನಿಧಾನದಲ್ಲಿ ಜಾತ್ರಾ ಮಹೋತ್ಸವದ 2ನೇ ಚೆಂಡು ಹಾಗೂ ಹೂ ತೇರು ಉತ್ಸವ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾಮಹೋತ್ಸವದ ಎರಡನೇ ದಿನದದಂದು ಹೂ ತೇರು ಉತ್ಸವವು ಏ.7ರಂದು ಭಾನುವಾರ ನೆರವೇರಿತು.
ಜಾತ್ರಾ ಮಹೋತ್ಸವದ ಎರಡನೇ ಚೆಂಡಿನ ಉತ್ಸವವು ಪರ್ಧಖಂಡ ಮಾಧವ ಭಟ್ ಚೆಂಡು ಹಾರಿಸಿದಾಗ ಮಳಲಿ ಹಾಗೂ ಅಮ್ಮುಂಜೆ ಕಡೆಯ ಯುವಕರು ಚೆಂಡಾಟ ಆಡಿದರು.
ದೇವಳದ ತಂತ್ರಿಗಳಾದ ಸುಭ್ರಹ್ಮಣ್ಯ ತಂತ್ರಿ ಹಾಗೂ ದೇವಳದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಕೆ. ರಾಮ್ ಭಟ್, ಪರಮೇಶ್ವರ ಭಟ್, ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊಕ್ತೇಸರರಾದ ಯು. ತಾರನಾಥ ಅಳ್ವ, ಚೇರಾ ಸೂರ್ಯ ನಾರಾಯಣ ರಾವ್, ಅಮ್ಮುಂಜೆಗುತ್ತಿನವರು, ಉಳಿಪಾಡಿಗುತ್ತಿನವರು, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ದೇವಳದ ಪ್ರಮುಖರು ಸಾವಿರ ಸೀಮೆಯ ಭಕ್ತಾಧಿಗಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.