ಶ್ರೀ ಕ್ಷೇತ್ರ ಪೊಳಲಿಯಲ್ಲಿ ಕಡೇ ಚೆಂಡು ಹಾಗೂ ಆಳು ಪಲ್ಲಕ್ಕಿ ಉತ್ಸವ
ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದಂದು ಶ್ರೀ ದೇವರಿಗೆ ಮದ್ಯಾಹ್ನ ಮಹಾಪೂಜೆ ನೆರವೇರಿತು.

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಜಾತ್ರಾ ಮಹೋತ್ಸವದ ಏ.10 ರಂದು ಬುಧವಾರ ಕಡೇ ಚೆಂಡು ಉತ್ಸವ ಹಾಗೂ ಆಳು ಪಲ್ಲಕ್ಕಿ ಉತ್ಸವವು ನಡೆಯಲಿದೆ.
ದೇವಳದ ತಂತ್ರಿಗಳಾದ ಸುಭ್ರಹ್ಮಣ್ಯ ತಂತ್ರಿ ಹಾಗೂ ದೇವಳದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಕೆ. ರಾಮ್ ಭಟ್, ಪರಮೇಶ್ವರ ಭಟ್, ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊಕ್ತೇಸರರಾದ ಯು. ತಾರನಾಥ ಅಳ್ವ, ಚೇರಾ ಸೂರ್ಯ ನಾರಾಯಣ ರಾವ್, ಅಮ್ಮುಂಜೆಗುತ್ತಿನವರು, ಉಳಿಪಾಡಿಗುತ್ತಿನವರು, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಹಾಗೂ ದೇವಳದ ಪ್ರಮುಖರು ಸಾವಿರ ಸೀಮೆಯ ಭಕ್ತಾಧಿಗಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.