ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಹಾಗೂ ನಾಗಮಂಡಲ ಸೇವೆ
ಕೈಕಂಬ: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಏ.೨೨ರ ಸೋಮವಾರದಿಂದ ೩೦ರ ಮಂಗಳವಾರದ ವರೆಗೆ ಶ್ರೀ ಉಳ್ಳಾಯ, ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ ಹಾಗೂ ಅಷ್ಟಪವಿತ್ರ ನಾಗಮಂಡಲ ಸೇವೆ ಮತ್ತು ಜಾತ್ರಾ ಮಹೋತ್ಸವ ನಡೆಯಲಿದೆ.
ಏ.೨೬ರಂದು ಶುಕ್ರವಾರ ಶ್ರೀ ಫಲಿಮಾರು ಮಠದ ಶ್ರೀ ಅಷ್ಟೋತ್ತರಶತ ಶ್ರೀ ವಿಧ್ಯಾಧೀಶತೀರ್ಥ ಸ್ವಾಮೀಜಿ, ಶ್ರೀ ಕ್ಷೇತ್ರ ಕಟೀಲು ಆಸ್ರಣ್ಣರ ಉಪಸ್ಥಿತಿಯಲ್ಲಿ, ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿ, ಕೃಷ್ಣರಾಜ ತಂತ್ರಿ ಇವರಿಂದ ಶ್ರೀ ಉಳ್ಳಾಯ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ ನೆರವೇರಲಿದೆ.
ಅದೇ ದಿನ ರಾತ್ರಿ ೯:೦೦ಗಂಟೆಗೆ ಗೋಪಾಲಕೃಷ್ಣ ಸಾಮಗರ ನೇತೃತ್ವದಲ್ಲಿ ಅಷ್ಟಪವಿತ್ರ ನಾಗಮಂಡಲ ಸೇವೆ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ.
ಏ.೨೭ರಿಂದ ೩೦ರ ವರೆಗೆ ದೈವಗಳಿಗೆ ನೇಮೋತ್ಸವ ನಡೆಯಲಿದೆ.
ಈ ಸಂದರ್ಭದಲ್ಲಿ ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.