ಬಂಟ್ವಾಳ :ಸ. ಸೇ. ಸ.ಸಂಘಕ್ಕೆ 5.71 ಕೋ.ರೂ. ನಿವ್ವಳ ಲಾಭ
ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತವು 2023-34 ಸಾಲಿನಲ್ಲಿ 982.54 ಕೋ.ರೂ. ವ್ಯವಹಾರ ನಡೆಸಿ, 5.71 ಕೋಟಿ (ತಾತ್ಕಲಿಕ) ಲಾಧ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದ್ದಾರೆ.
ಸ್ವಾತಂತ್ಯ ಹೋರಾಟಗಾರ, ಸಮಾಜರತ್ನ ದಿವಂಗತ ಡಾ.ಅಮ್ಮೆಂಬಳ ಬಾಳಪ್ಪರವರ ನೇತೃತ್ವದಲ್ಲಿ ಹಾಗೂ ಸಹಕಾರಿ ಧುರಿಣ ಬಿ. ಹೂವಯ್ಯ ಮೂಲ್ಯರವರ ಸಾರಥ್ಯದಲ್ಲಿ ಕೇವಲ ೧೩೧ ಸದಸ್ಯರನ್ನೊಳಗೊಂಡು ೨೨,೬೨೦/- ಪಾಲು ಬಂಡವಾಳದೊಂದಿಗೆ ಸ್ಥಾಪಿಸಲ್ಪಟ್ಟ ಸಮಾಜ ಸೇವಾ ಸಹಕಾರಿ ಸಂಘವು ಪ್ರಸ್ತುತ ೧೬ ಶಾಖೆಗಳನ್ನು ಹೊಂದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕಾರ್ಯ ವ್ಯಾಪ್ತಿಯನ್ನು ಹೊಂದಿರುತ್ತದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಘದ ಪುಂಜಾಲಕಟ್ಟೆ, ಮುಡಿಪು ಮತ್ತು ಉಪ್ಪಿನಂಗಡಿ ಶಾಖೆಯು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಬಂಟ್ವಾಳದ ಬೈಪಾಸ್ ನಲ್ಲಿ ಸ್ವಂತ ಕಟ್ಟಡದಲ್ಲಿ ಕೇಂದ್ರ ಕಛೇರಿ ಹೊಂದಿರುವ ಸಂಘವು ೭ .೮೭ ಕೋ.ರೂ. ಪಾಲು ಬಂಡವಾಳ,೧೫.೬೮ ಕೋ. ರೂ. ನಿಧಿಗಳು, ೫೯.೭೭ ಕೋ. ರೂ. ವಿನಿಯೋಗಗಳು, ೨೧೪.೨೬ ಕೋ. ರೂ. ಠೇವಣಾತಿಗಳಿದ್ದು ೧೯೧.೬೧ ಕೋಟಿ ರೂ. ಹೊರಬಾಕಿ ಸಾಲಗಳು ಇರುತ್ತದೆ. ಸಂಘದ ದುಡಿಯುವ ಬಂಡವಾಳ ರೂ. ೨೩೯.೯೦ ಕೋಟಿ ಆಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಡಿಟ್ ವರ್ಗೀಕರಣದಲ್ಲಿ ಸತತವಾಗಿ “ಎ” ತರಗತಿ ಹೊಂದಿರುವ ಸಂಘವು ಸದಸ್ಯರ ಅನುಕೂಲಕ್ಕಾಗಿ ಬಂಟ್ವಾಳ ಬೈಪಾಸ್ ಶಾಖೆಯಲ್ಲಿ ಇ-ಸ್ಟ್ಯಾಂಪ್ , ಕೆಲವು ಶಾಖೆಗಳಲ್ಲಿ ಸೇಪ್ ಲಾಕರ್ , ಮಣಿಪಾಲ ಆರೋಗ್ಯ ಕಾರ್ಡ್ ಸೌಲಭ್ಯಗಳು, ಸದಸ್ಯರ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿ ವೇತನ, ಯಶಸ್ವಿನಿ ಆರೋಗ್ಯ ರಕ್ಷಣಾ ಸೌಲಭ್ಯ, ಸದಸ್ಯರ ಗಂಭೀರವಾದ ಕಾಯಿಲೆಗೆ ಆರ್ಥಿಕ ಸಹಾಯಧನ ಹೀಗೆ ಹಲವಾರು ಸೌಲಭ್ಯಗಳನ್ನು ಸದಸ್ಯರಿಗೆ ನೀಡುತ್ತಾ ಬಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೨೨-೨೩ ನೇ ಸಾಲಿನಲ್ಲಿ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿ ಹಾಗೂ ಬ್ಯಾಂಕಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇವರಿಂದ ಸಾಧನಾ ಪ್ರಶಸ್ತಿ ಪಡೆದುಕೊಂಡಿರುತ್ತದೆ.
೨೦೨೩-೨೪ ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೆ ಸಹಕರಿಸಿದ ಸರ್ವ ಸದಸ್ಯರು, ಗ್ರಾಹಕರಿಗೆ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಕೃತಜ್ಞತೆ ಸಲ್ಲಿಸಿದ್ದಾರೆ.
ReplyReply allForwardAdd reaction |