ಬಂಟ್ವಾಳ : ಪುರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕುಡಿಯುವ ನೀರನ್ನು ಕೃಷಿ,ಕೈಗಾರಿಕೆ,ವಾಣಿಜ್ಯ ಉದ್ದೇಶಕ್ಕೆ ಬಳಸದೇ ಅವಶ್ಯಕತೆಗೆ ತಕ್ಕಂತೆ ಮಿತವಾಗಿ ಬಳಸಬೇಕು, ನೀರಿನ ದುರುಪಯೋಗ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ  ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆಯ ಮುಖ್ಯಾಧಿಕಾರಿಯವರು ಪ್ರಕಟಣೆಯ ಮೂಲಕ ಎಚ್ಚರಿಸಿದ್ದಾರೆ.


ಪುರಸಭೆಯ ಕುಡಿಯುವ ನೀರಿಗಾಗಿ ನೇತ್ರಾವತಿ ನದಿಯನ್ನು ಅವಲಂಭಿಸಲಾಗುತ್ತಿದ್ದು, ಪ್ರಸ್ತುತ ಬೇಸಿಗೆ ಕಾಲದಲ್ಲಿ ನೇತ್ರಾವಲ್ಲಿ ನದಿಯಲ್ಲಿ ನೀರಿನ ಒಳಹರಿವು ಕಡಿಮೆ ಆಗಿರುವುದರಿಂದ ಸಾರ್ವಜನಿಕರಿಗೆ ನೀರಿನ ಪೂರೈಕೆ ಮಾಡುತ್ತಿದ್ದರೂ, ಮುಂದಕ್ಕೆ ಮಳೆ ಬಾರದೇ ಇದ್ದಲ್ಲಿ ಸೂಕ್ತ ಸಮಯಕ್ಕೆ ನೀರಿನ ಪೂರೈಕೆಗೆ ಅನಾನುಕೂಲವಾಗುವ ಸಂಭವವಿರುತ್ತದೆ.ಹಾಗಾಗಿ ನೀರನ್ನು ಮಿತವಾಗಿ ಬಳಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

By Suddi9

Leave a Reply

Your email address will not be published. Required fields are marked *