ಕಾಂಗ್ರೆಸ್ ನಿಂದ ಎಲ್ಲಾ ಸಮುದಾಯಕ್ಕು ಅವಕಾಶ : ವಿಶ್ವಾಸದಾಸ್
ಬಂಟ್ವಾಳ:ವಿಧಾನ ಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದು,ಇದು ಪ್ರತಿಯೋರ್ವ ಜನರಿಗೂ ತಲುಪಿ,ಸಾಮಾನ್ಯ ಜನರು ಸ್ವಾಭಿಮಾನದಿಂದ ಬದುಕುವಂತಾಗಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಜಿಲ್ಲಾಧ್ಯಕ್ಷ ವಿಶ್ವಾಸಕುಮಾರ್ ದಾಸ್ ಹೇಳಿದ್ದಾರೆ.

ಮಂಗಳವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿನಡೆದ ಕಾಂಗ್ರೆಸ್ ಬಂಟ್ವಾಳ ಮತ್ತು ಪಾಣೆಮಂಗಳೂರು ಹಿ.ವರ್ಗಗಳ ಘಟಕದ ಆಶ್ರಯದಲ್ಲಿ ನಡೆದ ವಿವಿಧ ಹಿಂದುಳಿದ ಸಮುದಾಯ ಮತ್ರು ಸಮಾನ ಮನಸ್ಕರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಎಲ್ಲಾ ಸಮುದಾಯಕ್ಕು ಅವಕಾಶ ಕಾಂಗ್ರೆಸ್ ಪಕ್ಷ ನೀಡಿದೆ.ಜಿಲ್ಲೆಯಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ.ಕಾಂಗ್ರೆಸ್ ಪಕ್ಷ ಈ ಬಾರಿ ಉತ್ತಮ ವ್ಯಕ್ತಿತ್ವದ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.ಜಿಲ್ಲೆಯ ಜನತೆ ಆರ್ಶೀವದಿಸಿದರೆ. ಜಿಲ್ಲೆಯ ಅಭಿವೃದ್ಧಿಯ ಶ್ರಮಿಸುವ ವಿಶ್ವಾಸವಿದೆಯಲ್ಲದೆ ಅವರ ಗುರುಗಳಾದ ಜನಾರ್ದನ ಪೂಜಾರಿಯವರ ಹಾದಿಯಲ್ಲೆ ಸಾಗಲಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೊಡ್ರಿಗಸ್,ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್,ಗಾಣಿಗ ಸಮಾಜದ ಮುಖಂಡ ಉಮೇಶ್ ಬೋಳಂತೂರು,ನಾವೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಉಮೇಶ್ ಕುಲಾಲ್ ನಾವೂರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಪಕ್ಷದ ಜಿಲ್ಲಾ ಪ್ರ.ಕಾರ್ಯದರ್ಶಿ
ಚಿತ್ತರಂಜನ್ ಶೆಟ್ಟಿ,ತಾ.ಪಂ.ಮಾಜಿ ಸದಸ್ಯ ಸಂಜೀವ ಪೂಜಾರಿ ಕುಚ್ಚಿಗುಡ್ಡೆ,ಅಕ್ರಮ ಸಕ್ರಮ ಸಮಿತಿಯ ಮಾಜಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್,ಗ್ರಾ.ಪಂ.ಅಧ್ಯಕ್ಷೆ ಶೋಭಾ ಶೆಟ್ಟಿ, ಪ್ರಮುಖರಾದ ಕರೀಂ ಬೊಳ್ಳಾಯಿ,ದಿನೇಶ್ ಶೆಟ್ಟಿಗಾರ್,ಮಧುಸೂದನ್ ಸಿದ್ದಕಟ್ಟೆ,ಬಾಬು ಭಂಡಾರಿ,ಹಿ.ವರ್ಗದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಪಣೋಲಿಬೈಲ್ ವೇದಿಕೆಯಲ್ಲಿದ್ದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜಗದೀಶ್ ಕುಲಾಲ್ ಪ್ರಸ್ತಾವನೆಗೈದರು.ಹಿ.ವರ್ಗ
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಮ್ಮಪ್ಪ ಕುಲಾಲ್ ಸ್ವಾಗತಿಸಿದರು. ಸಿಂಡಿಕೇಟ್ ಸದಸ್ಯ ಸುರೇಶ್ ಕುಲಾಲ್ ವಂದಿಸಿದರು.