Published On: Thu, Apr 25th, 2024

ಕೆ ಎಸ್ ಎಸ್ ಕಾಲೇಜ್: ಅಧ್ಯಯನ ವಿನಿಮಯ ಕಾರ್ಯಕ್ರಮ

ಬಂಟ್ವಾಳ: ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಾಣಿಜ್ಯಶಾಸ್ತ್ರ ಮತ್ತು ಉದ್ಯಮಾಡಳಿತ ವಿಭಾಗವು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದೊಂದಿಗೆ ಮಾಡಿಕೊಂಡ ಎಂ.ಓ.ಯು .ಪ್ರಕಾರ ಅಧ್ಯಯನ ವಿನಿಮಯ ಕಾರ್ಯಕ್ರಮ ಮಹಾವಿದ್ಯಾಲಯದಲ್ಲಿ ನಡೆಯಿತು.

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ 10 ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದ ವಿವಿಧ ವಿಷಯಗಳಾದ ನಾಯಕತ್ವ ಕಲೆ, ಸಂವಹನ ಕಲೆ, ಸೃಜನಶೀಲತೆ ಮತ್ತು ಸಮಯ ನಿರ್ವಹಣೆ  ಬಗ್ಗೆ ತಮ್ಮ ವಿಚಾರಗಳನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಂಶುಪಾಲರದ ಡಾ. ದಿನೇಶ.ಕೆ,ಐಕ್ಯೂಎಸಿ ಸಂಯೋಜಕರಾದ  ಲತಾ ಬಿ.ಟಿ ಕಾರ್ಯಕ್ರಮದ ಸಂಯೋಜಕರಾದ ಶಿವಪ್ರಸಾದ್ ಎಸ್ ಹಾಗೂ ಶ್ರೀರಾಮ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾದ ಹರ್ಷಿತ್ ಕುಮಾರ್ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಕೌಶಿಕ್ ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter