ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ
ಕೈಕಂಬ: ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಹಾಗೂ ಏಕಾದಶ ರುದ್ರಾಭಿಷೇಕವು ಮೇ.೧೧ರಂದು ಶನಿವಾರ ನಡೆಯಲಿದೆ.

ಶನಿವಾರದಂದು ರಾತ್ರಿ ಶ್ರೀ ಕಾವೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕಾವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಶ್ರೀಮತಿ ಮತ್ತು ಶ್ರೀ ರಘು ಎಲ್ ಶೆಟ್ಟಿ ಅವರ ಸೇವರೂಪದಲ್ಲಿ
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.
ಶ್ರೀ ಕಾವೇಶ್ವರ ದವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.